ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದ ಐಸಿಸಿ ಪುರುಷರ T-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ 96 ರನ್ ಗಳ ಜಯ ಗಳಿಸಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಗೆಲುವಿನ ಮೂಲಕ ಭಾರತ ಕ್ರಿಕೆಟ್ ತಂಡ ಹಲವು ವಿಶ್ವ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. 2024 ರಲ್ಲಿ T-20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದ್ದ ಭಾರತ ಕ್ರಿಕೆಟ್ ತಂಡ, ತನ್ನ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

T-20 ವಿಶ್ವಕಪ್ ಇತಿಹಾಸದಲ್ಲಿ ಯಾವುದೇ ಹಾಲಿ ಚಾಂಪಿಯನ್ ತಂಡ ಸತತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಇತಿಹಾಸವಿಲ್ಲ. ಆದರೆ ಭಾರತ ಈ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಸತತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿರುವುದು ಮೊದಲ ದಾಖಲೆ.

ಚಾಂಪಿಯನ್ ಪಟ್ಟ ಪಡೆದ ಮೊದಲ ಆತಿಥೇಯ ತಂಡ ಭಾರತ T-20 ವಿಶ್ವಕಪ್ ಟೂರ್ನಿ ಆಯೋಜಿಸಿದ್ದ ಯಾವುದೇ ಆತಿಥೇಯ ತಂಡ ಈ ವರೆಗೂ ವಿಶ್ವಕಪ್ ನ್ನು ತನ್ನದಾಗಿಸಿಕೊಂಡ ಇತಿಹಾಸವಿರಲಿಲ್ಲ. ಆದರೆ ಈ ವಿಭಾಗದಲ್ಲೂ ಅತ್ಯದ್ಭುತ ಸಾಧನೆ ಮಾಡಿದ್ದು, ಆತಿಥೇಯ ತಂಡವೊಂದು ಮೊದಲ ಬಾರಿಗೆ ವಿಶ್ವಕಪ್ ಪಟ್ಟ ಪಡೆದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಕ್ರಿಕೆಟ್ ತಂಡ ಪಾತ್ರವಾಗಿದೆ.

ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಪಡೆದ ಮೊದಲ ತಂಡ ಭಾರತ, T-20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಬಾರಿ ವಿಶ್ವಕಪ್​ನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಎಂಎಸ್ ಧೋನಿ ನೇತೃತ್ವದಲ್ಲಿ 2007ರಲ್ಲಿ ಮೊದಲ ಬಾರಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಮಣಿಸಿ T-20 ವಿಶ್ವಕಪ್ ಟ್ರೋಫಿ ಪಡೆದಿತ್ತು. ನಂತರ 2024ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಬಾರಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿ ಮೂರನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ