ಇಡ್ಲಿ ಎನ್ನುವ ಸಾಂಪ್ರದಾಯಿಕ ತಿಂಡಿಯು ಇಂದು, ಕೇವಲ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಅವಿಭಜಿತ ರಾಜ್ಯದ ಬೆಳಗಿನ ಉಪಹಾರವಾಗಿಯಷ್ಟೇ ಉಳಿಯದೇ, ಈಗ ಅಂತರಾಷ್ಟ್ರೀಯ ಮಟ್ಟದಲ್ಲೂ ಮಾನ್ಯತೆ ಪಡೆದು ವಿಶ್ವವಿಖ್ಯಾತವಾಗಿದ್ದು, ಪ್ರಪಂಚದ ಮೂಲೆ ಮೂಲೆಯಲ್ಲಿಯೂ ಸಹಾ ಇಡ್ಲಿ ಸಾಂಬಾರ್ ಚೆಟ್ನಿ ಸಿಗುವಂತಾಗಿದ್ದು ಎಲ್ಲರ ಮೆಚ್ಚಿನ ಖಾದ್ಯವಾಗಿದೆ. ಹಾಗಾಗಿಯೇ ಅನೇಕರು ಇಡ್ಲಿಯನ್ನು ತಿಂಡಿಗಳ ರಾಜ ಎಂದು ಕರೆದರೆ ತಪ್ಪಾಗದು. ಉದ್ದಿನ ಬೇಳೆ ಮತ್ತು ಅಕ್ಕಿಯನ್ನು ಒಂದು ನಿರ್ಧಿಷ್ಟ ಪ್ರಮಾಣದಲ್ಲಿ ನೆನಸಿ ಅದನ್ನು ಹದವಾಗಿ ರುಬ್ಬಿ ಒಂದು ರಾತ್ರಿ ಇಡೀ ಹಾಗೇ ಬಿಟ್ಟಲ್ಲಿ ನೈಸರ್ಗಿಕವಾಗಿ ಈಸ್ಟ್ ಉತ್ಪತ್ತಿಯಾಗಿ ಹುದುಗು ಬಂದು ಹಿಟ್ಟಿಗೆ ರುಚಿಗೆ ತಕ್ಕಷ್ಟು ಉಪ್ಪನ್ನು ಬೆರೆಸಿ, ಬೇಕಾದ ಆಕಾರದ ಬಟ್ಟಲು/ತಟ್ಟೆಗಳಲ್ಲಿ ಹಾಕಿ ಇಡ್ಲೀ ಪಾತ್ರೆಯಲ್ಲಿಟ್ಟು ಹಬೆಯಲ್ಲಿ ಬೇಯಿಸಿದರೆ ರುಚಿ ರುಚಿಯಾದ, ಅತ್ಯಂತ ಹೆಚ್ಚಿನ ಪೌಷ್ಠಿಕಾಂಶವನ್ನು ಹೊಂದಿರುವ ಮತ್ತು ಅಷ್ಟೇ ಆರೋಗ್ಯಕರವಾದ ಇಡ್ಲಿಗಳು ಸವಿಯಲು ಸಿದ್ಧವಾಗಿರುತ್ತದೆ. ಈ ಇಡ್ಲಿಗಳನ್ನು ಅವರವರ ರುಚಿ ಮತ್ತು ಅಭಿರುಚಿಗೆ ತಕ್ಕಂತೆ, ಬಗೆ ಬಗೆಯ ಚಟ್ನಿ, ಚಟ್ನಿ ಪುಡಿ, ಬೆಣ್ಣೆ, ಸಾಂಬಾರ್ ಇಲ್ಲವೇ ಗೊಜ್ಜುಗಳೊಂದಿಗೆ ತಿನ್ನುವ ಆನಂದವನ್ನು ಇಲ್ಲಿ ವರ್ಣಿಸುವುದಕ್ಕಿಂತಲೂ ಅನುಭವಿಸಿದರೇ ಆನಂದ.

ಇಂತಹ ಇಡ್ಲಿಗಳಿಗಳೂ ಈಗ ವಿಶ್ವ ಮಾನ್ಯತೆಯನ್ನು ಪಡೆದಿದ್ದು ಪ್ರತೀ ವರ್ಷ ಮಾರ್ಚ್ 30ರಂದು ವಿಶ್ವ ಇಡ್ಲಿ ದಿನವನ್ನು ಆಚರಿಸುವ ಹಿಂದೆಯೂ ಒಂದು ಅದ್ಭುತವಾದ ರೋಚಕತೆ ಇದೆ. ತಮಿಳುನಾಡಿನ ಕೊಯಂಬತ್ತೂರು ಮೂಲದ ಕೇವಲ ಎಂಟನೇ ತರಗತಿಯವರೆಗೆ ಮಾತ್ರ ಓದಿದ್ದ ಇನಿಯವನ್ ಜೀವನೋಪಾಯಕ್ಕಾಗಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದಾಗ, ಪ್ರತಿದಿನ ಬೆಳಿಗ್ಗೆ ಇಲ್ಲವೇ ಸಂಜೆ ಹಸಿವಾದಾಗ ರಸ್ತೆಯ ಬದಿಯಲ್ಲಿ ಇಡ್ಲಿಗಳನ್ನು ತಯಾರಿಸಿ ಮಾರುತ್ತಿದ್ದ ಮಹಿಳೆಯೊಬ್ಬರ ಬಳಿ ಇಡ್ಲಿಗಳನ್ನು ಖರೀದಿಸಿ ತಿನ್ನುವ ಮೂಲಕ ತಮ್ಮ ಹಸಿವನ್ನು ನೀಗಿಸಿಕೊಳ್ಳುತ್ತಿರುತ್ತಾರೆ, ಹಾಗೆ ಪರಿಚವಾದ ಆ ಮಹಿಳೆಯ ಹತ್ತಿರವೇ ಇಡ್ಲಿ ಮಾಡುವುದನ್ನು ಕಲಿತ ಇನಿಯವನ್ ನಂತರ ದಿನಗಳಲ್ಲಿ ಅದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಲ್ಲದೇ, ಇಡ್ಲಿಗಳಲ್ಲೇ ಸಾವಿರಾರು ರೀತಿಯ ಆವಿಷ್ಕಾರಗಳನ್ನು ಮಾಡುವಷ್ಟು ಬೆಳೆದದ್ದು ನಿಜಕ್ಕೂ ಅದ್ಭುತವೇ ಸರಿ. ಕೇವಲ ಉದ್ದಿನ ಬೇಳೆ ಮತ್ತು ಅಕ್ಕಿಯಷ್ಟನ್ನೇ ಬಳಸಿ ತಯಾರಿಸುವ ಇಡ್ಲಿಗಳನ್ನೇ ವಿವಿಧ ರೀತಿಯ ಪದಾರ್ಥಗಳನ್ನು ಬಳಸಿಕೊಂಡು ವಿವಿಧ ರೀತಿಯ ಬಣ್ಣದ ಹಾಗು ರುಚಿಯ ಇಡ್ಲಿಗಳನ್ನು ತಯಾರಿಸಲು ವಿವಿಧ ರೀತಿಯ ಪ್ರಯೋಗಗಳನ್ನು ಮಾಡಲು ಮುಂದಾದ ಇನಿಯವನ್, ಇದುವರೆವಿಗೂ ಸುಮಾರು 2000 ವಿಧದ ಇಡ್ಲಿಗಳನ್ನು ತಯಾರಿಸಿ ದಾಖಲೆ ಸೃಷ್ಟಿಸಿದ್ದನ್ನು ಗಮನಿಸಿದ ಅಮೆರಿಕದ ವಿವಿಯೊಂದು ಅವರಿಗೆ ಗೌರವ ಡಾಕ್ಟರೇಟ್‌ನ್ನೂ ನೀಡಿದೆ.

iniyvan

2013ರಲ್ಲಿ ಸುಮಾರು 75 ಕೆಜಿ ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ಬಳಸಿಕೊಂಡು ಸುಮಾರು 128 ಕೆಜಿ ತೂಕದ ಇಡ್ಲಿಯೊಂದನ್ನು ತಯಾರಿಸಿ ಗಿನ್ನೆಸ್ ದಾಖಲೆ ಮಾಡಿದ ನಂತರ ಇನಿಯವನ್ ವಿಶ್ವಾದ್ಯಂತ ಪ್ರಖ್ಯಾತರಾಗಿ ಹೋದರು. ಇಡ್ಲಿಗಳ ಕುರಿತಾದ ಇನಿಯವನ್ ಅವರ ವಿಶೇಷ ಪ್ರಯೋಗಗಳನ್ನು ಗುರುತಿಸಿ, ಆತನ ಸಾಧನೆಯನ್ನು ಗೌರವಿಸುವ ಸಲುವಾಗಿ 2015ರಲ್ಲಿ ಅವರ ಹುಟ್ಟುಹಬ್ಬವಾದ ಮಾರ್ಚ್ 30ನೇ ತಾರೀಖಿನಂದು ವಿಶ್ವ ಇಡ್ಲಿ ದಿನ ಎಂದು ಆಚರಿಸುವ ನಿರ್ಧಾರವನ್ನು ತಮಿಳ್ನಾಡು ಕೇಟರಿಂಗ್ ಎಂಪ್ಲಾಯೀಸ್ ಯೂನಿಯನ್ ಪ್ರೆಸಿಡೆಂಟ್ ಎಂ.ಜಿ ರಾಜಾಮಣಿ ಘೋಷಿಸುವುದರ ಮೂಲಕ ವಿಶ್ವ ಇಡ್ಲಿ ದಿನ ರೂಢಿಗೆ ಬಂದಿದೆ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ