ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಇಂಡಿಗೋ ವಿಮಾನವೊಂದು ಟೇಲ್ ಸ್ಟ್ರೈಕ್‌ಗೆ ಒಳಗಾಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

6E 6542 ಸಂಖ್ಯೆಯ ವಿಮಾನ ಗುವಾಹಟಿಯಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಗಾಳಿ ಜೋರಾಗಿ ಬೀಸುತ್ತಿದ್ದಾಗಲೇ ಲ್ಯಾಂಡಿಂಗ್ ಆಗಿದ್ದ ವೇಳೆ ಈ ಘಟನೆ ನಡೆದಿದ್ದು, ಘಟನೆ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತನಿಖೆ ಆರಂಭಿಸಿದೆ.

ಗಾಳಿ ಜೋರಾಗಿ ಬೀಸುತ್ತಿದ್ದ ಸಂದರ್ಭದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನವು ಅಸಹಜ ರನ್‌ವೇ ಸಂಪರ್ಕದ ಸಮಸ್ಯೆ ಎದುರಿಸಿದೆ ಎಂದು ಇಂಡಿಗೋ ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಘಟನೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಿಮಾನ ನಿರ್ವಹಣೆ ಮತ್ತು ತಾಂತ್ರಿಕ ಪರಿಶೀಲನೆಗಾಗಿ ಕಳುಹಿಸಲಾಗಿದೆ. ಅನುಮತಿಗಳು ದೊರೆತ ಬಳಿಕ ವಿಮಾನ ಮತ್ತೆ ಕಾರ್ಯಾಚರಣೆ ಆರಂಭಿಸಲಿದೆ ಎಂದು ಇಂಡಿಗೋ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಸರಣಿ ಸಮಸ್ಯೆ?: ಈ ತಿಂಗಳು ಇಂಡಿಗೋ ವಿಮಾನಗಳಿಗೆ ಸಂಬಂಧಿಸಿದಂತೆ ಇಂತಹ ಹಲವು ಘಟನೆಗಳು ವರದಿಯಾಗಿವೆ.

ಬುಧವಾರ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ಡ್ರೀಮ್‌ಲೈನರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಹೀಗಾಗಿ ಲಂಡನ್ ಹೀಥ್ರೂ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸುಮಾರು ಒಂದು ಗಂಟೆಯ ಬಳಿಕ ವಿಮಾನ ಮತ್ತೆ ಅಲ್ಲಿಗೇ ವಾಪಸ್ ಆಗಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಲಂಡನ್ ಹೀಥ್ರೂದಿಂದ ದೆಹಲಿಗೆ ತೆರಳುತ್ತಿದ್ದ ಬೋಯಿಂಗ್ 787-9 ವಿಮಾನವು 6E4 ಸಂಖ್ಯೆಯ ವಿಮಾನವಾಗಿತ್ತು. FlightRadar24.com ಮಾಹಿತಿ ಪ್ರಕಾರ, ಬುಧವಾರ ಬೆಳಗ್ಗೆ ಸುಮಾರು 12.40ಕ್ಕೆ (IST) ಟೇಕ್ ಆಫ್ ಆಗಿದ್ದ ವಿಮಾನ ಸುಮಾರು 2 ಗಂಟೆಗೆ ಮತ್ತೆ ಲಂಡನ್ ಹೀಥ್ರೂಗೆ ಸುರಕ್ಷಿತವಾಗಿ ಮರಳಿತ್ತು. ಈ ಬಗ್ಗೆ ಇಂಡಿಗೋ ಯಾವುದೇ ಅಧಿಕೃತ ಹೇಳಿಕೆ ನೀಡಿರಲಿಲ್ಲ.

ಸೆಪ್ಟೆಂಬರ್ 15ರಂದು ಅಗರ್ತಲಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ವಿಮಾನದ ಕಾರ್ಗೋ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಎಚ್ಚರಿಕೆಯ ಹಿನ್ನೆಲೆಯಲ್ಲಿ ಲಕ್ನೋಗೆ ತಿರುಗಿಸಲಾಗಿತ್ತು.  6E6504 ಸಂಖ್ಯೆಯ ಈ ವಿಮಾನದಲ್ಲಿ 103 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಇದ್ದರು. ವಿಮಾನ ಸಂಜೆ 6.29ಕ್ಕೆ ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಪಿಟಿಐ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿತ್ತು.

ವಿಮಾನ ನಿಲ್ದಾಣದ ಅಧಿಕಾರಿಗಳು ತಕ್ಷಣ ತುರ್ತು ಪರಿಸ್ಥಿತಿ ನಿರ್ವಹಣಾ ಕ್ರಮಗಳನ್ನು ಜಾರಿಗೆ ತಂದಿದ್ದರು. ಅಗ್ನಿಶಾಮಕ, ರಕ್ಷಣಾ ಸಿಬ್ಬಂದಿ, ಆಂಬ್ಯುಲೆನ್ಸ್ ಹಾಗೂ ಟರ್ಮಿನಲ್ ಸಹಾಯ ತಂಡಗಳನ್ನು ನಿಯೋಜಿಸಿ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷಿತ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿತ್ತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ