ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ (ಮಾರ್ಚ್​ 28) ಶನಿವಾರ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಬೆಂಗಳೂರು ಸಜ್ಜಾಗಿದ್ದು, ಪಂದ್ಯ ನಡೆಯುವ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ಪೊಲೀಸ್, ಗೃಹ ರಕ್ಷಕ ದಳ ಹಾಗೂ ನಾಗರಿಕ ರಕ್ಷಣಾ ಸಿಬ್ಬಂದಿ ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದ್ದು, ಈ ಬಾರಿ 22ರಿಂದ ಸುಮಾರು 45 ದ್ವಾರಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.

ಆಂಬ್ಯುಲೆನ್ಸ್‌ಗಳು, ವೈದ್ಯಕೀಯ ತುರ್ತು ಸೇವಾ ಕೇಂದ್ರಗಳು (ಟ್ರಿಯಾಜ್), ಅಗ್ನಿಶಾಮಕ ವಾಹನಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಟಿಕೆಟ್ ಇಲ್ಲದೆ ಸ್ಟೇಡಿಯಂ ಸುತ್ತಮುತ್ತ ಗುಂಪುಗೂಡುವುದನ್ನು ತಡೆಯಲು ಪೊಲೀಸ್ ಹಾಗೂ ಸಿವಿಲ್ ಡಿಫೆನ್ಸ್ ವಿಶೇಷ ತಂಡಗಳನ್ನು ರಚಿಸಲಾಗಿದೆ.

ಪ್ರೇಕ್ಷಕರು ಟಿಕೆಟ್‌ನಲ್ಲಿ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸ್ಟೇಡಿಯಂ ಸುತ್ತಲಿನ ನಾಲ್ಕು ಪ್ರಮುಖ ರಸ್ತೆಗಳಲ್ಲಿ ನಿಲ್ಲಲು ಅವಕಾಶ ಇರುವುದಿಲ್ಲ. ಸಾರ್ವಜನಿಕರು ಮೆಟ್ರೋ ಮತ್ತು ಬಿಎಂಟಿಸಿ ಸಾರಿಗೆ ವ್ಯವಸ್ಥೆಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.

ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲು ಎರಡು ಹಂತದ ಮಾಕ್ ಡ್ರಿಲ್‌ಗಳನ್ನು ನಡೆಸಲಾಗಿದೆ. ಮೊದಲ ಹಂತದ ಡ್ರಿಲ್ ನಡೆದಿದ್ದು, ಗುರುವಾರ ಎರಡನೇ ಹಂತದ ಡ್ರಿಲ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಅಭ್ಯಾಸದಲ್ಲಿ ಪೊಲೀಸ್, ಎನ್‌ಎಸ್‌ಜಿ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಸಿಬ್ಬಂದಿಗಳು ಭಾಗಿಯಾಗಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ