ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು.ಗುಜರಾತ್ ತಂಡದ ಪರವಾಗಿ, ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದರು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು. ಎರಡು ವಿಕೆಟ್ ಗಳಿಸುವ ಮೂಲಕ, ಭುವನೇಶ್ವರ್ ಕುಮಾರ್ ಈಗಾಗಲೇ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಕಗಿಸೊ ರಬಾಡ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಗೆಲುವಿಗೆ 156 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ, ವಿರಾಟ್ ಕೊಹ್ಲಿ(75) ಅಜೇಯ ಭರ್ಜರಿ ಅರ್ಧ ಶತಕ ಹಾಗೂ ವೆಂಕಟೇಶ್ ಅಯ್ಯರ್(32) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ 18 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 161 ರನ್ ಗಳಿಸುವ ಮೂಲಕ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ