- ರಾಘವೇಂದ್ರ ಅಡಿಗ ಎಚ್ಚೆನ್.

ನಗರದ ಗಾಂಧಿ ಭವನದಲ್ಲಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 'ಪತ್ರಿಕಾ ದಿನಾಚರಣೆ-2026' ಕಾರ್ಯಕ್ರಮದಲ್ಲಿ, ಮಾಧ್ಯಮಗಳು ಆಡಳಿತ ಪಕ್ಷವನ್ನು ಕೇವಲ ವಿರೋಧಿಸುವುದನ್ನೇ ಗುರಿಯಾಗಿಸಿಕೊಳ್ಳದೆ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಸುದ್ದಿಗಳನ್ನು ಪ್ರಕಟಿಸಬೇಕೆಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಪತ್ರಕರ್ತರಿಗೆ ಶುಭ ಕೋರಿದರು.

1001594328

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರು, ಮಾಧ್ಯಮ ಯಾವುದೇ ಒತ್ತಡಕ್ಕೂ ಮಣಿಯದೇ ಕೆಲಸ ಮಾಡಿದಾಗ ಮಾತ್ರ ವ್ಯವಸ್ಥೆ, ಸಮಾಜಕ್ಕೆ ಒಳ್ಳೆಯದಾಗುತ್ತದೆ. ಕಳೆದ ಒಂದು ದಶಕದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ವೇಗವಾದ ಬದಲಾವಣೆಗಳಾಗಿವೆ. ಸಾಮಾಜಿಕ ಜಾಲತಾಣಗಳ ಭರಾಟೆಯಲ್ಲಿ ಸಾಂಪ್ರದಾಯಿಕ ಮಾಧ್ಯಮಕ್ಕೆ ದೊಡ್ಡ ಸವಾಲೇ ಎದುರಾಗಿದ್ದು, ಸಾರ್ವಜನಿಕರು ನಿಜವಾದ ಸುದ್ದಿಯನ್ನು ತಿಳಿದುಕೊಳ್ಳುವುದು ಕಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.

1001594329

ಪತ್ರಿಕಾ ದಿನಾಚರಣೆಯ ಅಂಗವಾಗಿ ನಡೆದ 'ಡಿಜಿಟಲ್ ಯುಗದಲ್ಲಿ ನೈಜ ಪತ್ರಕರ್ತರು ಯಾರು?' ಎಂಬ ವಿಚಾರಸಂಕಿರಣದಲ್ಲಿ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತ ಅಬ್ದುಸ್ಸಲಾಂ ಪುತ್ತಿಗೆ ಹಾಗೂ ತೆಲಂಗಾಣ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಶ್ರೀನಿವಾಸ ರೆಡ್ಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ, ಆಯ್ಕೆಯಾದ ಕೆಲವು ಪತ್ರಕರ್ತರಿಗೆ ಮಾಧ್ಯಮ ಕಿಟ್‌ ಗಳನ್ನು ವಿತರಿಸಲಾಯಿತು.

1001594325

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ವಾರ್ತಾ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷರಾದ ಡಾ. ಆರ್. ಪೂರ್ಣಿಮಾ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ವೋಡೇ ಪಿ. ಕೃಷ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ