ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ವಿವಿಧ ಕ್ಷೇತ್ರಗಳ ಹೆಮ್ಮೆಯ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯ್ಕೆಯಾದ 71 ಸಾಧಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ವಿವಿಧ ಕ್ಷೇತ್ರಗಳಲ್ಲಿ ಸಾಧಕರು ಮಾಡಿರುವ ನಿಸ್ವಾರ್ಥ ಸೇವೆ ಇಡೀ ಕರುನಾಡಿಗೆ ಹೆಮ್ಮೆ ತಂದಿದೆ ಎಂದು ಬಣ್ಣಿಸಿದರು.

ನಾಡು, ನುಡಿ ಮತ್ತು ಸಂಸ್ಕೃತಿಯ ಹಿರಿಮೆ ಹೆಚ್ಚಿಸಿದ ಈ ಗಣ್ಯರ ಶ್ರಮ ಮುಂದಿನ ಪೀಳಿಗೆಗೆ ಸದಾ ದಾರಿದೀಪವಾಗಿದ್ದು, ಇಂತಹ ಸಾರ್ಥಕ ಸಾಧನೆಯ ಹಾದಿ ನಿರಂತರವಾಗಿ ಮುಂದುವರಿಯಲಿ ಎಂದು  ಹಾರೈಸಿದರು.

ವೇದಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್‌ ತಂಗಡಗಿ, ವಿಧಾನಪರಿಷತ್‌ ಸಭಾಪತಿ ಸಲೀಂ ಅಹ್ಮದ್ ಹಾಗೂ ವಿಧಾನಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ