ಶಿಕ್ಷಣ ತಜ್ಞ ಹಾಗೂ ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ಡಾ. ಪ್ರಭಾಕರ್ ಕೋರೆ, ಡಾ. ಸುರೇಶ್ ಹನಗವಾಡಿ, ಶಶಿ ಶೇಖರ್ ವೇಂಪತಿ, ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್  ಸೇರಿದಂತೆ ಉದ್ಯಮಿ ಟಿ.ಟಿ. ಜಗನ್ನಾಥನ್ ಅವರಿಗೆ ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ. ಪ್ರಭಾಕರ್ ಕೋರೆ ಅವರು, ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ, ಕಡಿಮೆ ವೆಚ್ಚದ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ.  ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ.

ಶಶಿ ಶೇಖರ್ ವೇಂಪತಿ ಕೋವಿಡ್ ಸಮಯದಲ್ಲಿ ದೂರದರ್ಶನ ಮತ್ತು ಆಕಾಶವಾಣಿಯನ್ನು ಸಂಪೂರ್ಣವಾಗಿ ನವೀಕರಿಸಿ, ‘ರಾಮಾಯಣ’ ಪ್ರಸಾರದ ಮೂಲಕ ಜಾಗತಿಕ ದಾಖಲೆ ಬರೆದ ಹಾಗೂ ಕೋಟ್ಯಂತರ ವಿದ್ಯಾರ್ಥಿಗಳಿಗೆ ಉಚಿತ ಟಿವಿ ಶಿಕ್ಷಣ ತಲುಪಿಸಿದ ತಂತ್ರಜ್ಞರಾಗಿದ್ದಾರೆ. ಇವರು ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಿಂದ ಪದ್ಮಶ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

ಇನ್ನೂ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿರುವ ‘ದೃಷ್ಟಿ’ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ಕ್ಷಿಪಣಿಯ ತಾಂತ್ರಿಕ ದೋಷ ನಿವಾರಿಸಿ ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿಯಾಗಿದ್ದಾರೆ.

ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ಬೆಳೆಸಿ, ಕುಕ್ಕರ್ ಅಪಘಾತ ತಡೆಯುವ ಆವಿಷ್ಕಾರದ ಪೇಟೆಂಟ್ ಹಕ್ಕನ್ನು ದೇಶದ ಜನರ ಜೀವ ರಕ್ಷಣೆಗಾಗಿ ಇಡೀ ಉದ್ಯಮಕ್ಕೆ ಉಚಿತವಾಗಿ ಬಿಟ್ಟುಕೊಟ್ಟ ಉದ್ಯಮಿ ಟಿ.ಟಿ. ಜಗನ್ನಾಥನ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ