ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮ ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ.

ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ನಿತ್ಯ  8 ರಿಂದ ಹತ್ತು ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ ಹಾಗೂ ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ "ಕಾವೇರಿ ಆರತಿ" ವೀಕ್ಷಿಸಿ ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲಡ್ಡು ಮಾಡಿಸಿದ್ದಾರೆ

ನಿತ್ಯ ಲಡ್ಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.  ಆಗಮಿಸುವವರಿಗೆ ಲಡ್ಡು ವಿತರಣೆ ಮಾಡುವ ಮಾದರಿಯಲ್ಲಿ "ಕಾವೇರಿ ಆರತಿ" ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ  ಪ್ರಸಾದವಾಗಿ ಲಡ್ಡುವನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.

ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಬಹುದು. ಹೀಗಾಗಿ ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ವಿತರಿಸಲಾಗುವುದು.

ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಥಮವಾಗಿ ನೆರವೇರುತ್ತಿದ್ದು ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ.

ಸೆಪ್ಟೆಂಬರ್ 26ರ ಶುಕ್ರವಾರ ಸಂಜೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ