ದೇಶ ಕಾಯುವ ಸೈನಿಕ ದೇವರೇ ?

ದೇಹ ಕಾಯುವ ವೈದ್ಯ ದೇವರೇ ?

ಅನ್ನ ಬೆಳೆಯುವ ರೈತ ದೇವರೇ ?

ವಿದ್ಯೆ ನೀಡುವ ಶಿಕ್ಷಕ ದೇವರೇ ?

ಹುಟ್ಟಿಸುವ ತಂದೆ ದೇವರೇ ?

ಜನ್ಮ ನೀಡುವ ತಾಯಿ ದೇವರೇ ?

ಊಟ ಬಡಿಸುವ ಭಟ್ಟ ದೇವರೇ ?

ಅವಶ್ಯ ಇರುವ ಸ್ಥಳಕ್ಕೆ ತಲುಪಿಸುವ ಚಾಲಕ ದೇವರೇ ?

ವಕೀಲ ದೇವರೇ ?

ಪೋಲೀಸ್ ದೇವರೇ ?

ಅಧಿಕಾರಿ ದೇವರೇ ?

ರಾಜಕಾರಣಿ ದೇವರೇ ?

ಧರ್ಮಾಧಿಕಾರಿ ದೇವರೇ ?

ವಸತಿ ನಿರ್ಮಿಸುವ ಕಾರ್ಮಿಕ ದೇವರೇ ?

ಹೊಲಸು ತೊಳೆಯುವ ಕೂಲಿ ದೇವರೇ ?

ಸುದ್ದಿ ನೀಡುವ ಪತ್ರಕರ್ತ ದೇವರೇ ?

ಯಾರು ದೇವರು ?????

ಯುದ್ಧದ ಸಮಯದಲ್ಲಿ ಸೈನಿಕರನ್ನು ದೇವರೆನ್ನುವುದು,

ಹಸಿವಿನ ಸಮಯದಲ್ಲಿ ರೈತರನ್ನು ದೇವರೆನ್ನುವುದು,

ಅನಾರೋಗ್ಯದ ಸಮಯದಲ್ಲಿ ವೈದ್ಯರನ್ನು ದೇವರೆನ್ನುವುದು ಸರಿಯೇ ?

ಅದು ಕಪಟ ನಾಟಕವಾಗುವುದಿಲ್ಲವೇ ?

ಬದುಕಿನ ಯಾವುದೋ ಒಂದು ಸಂದರ್ಭದಲ್ಲಿ ಎಲ್ಲರೂ ಮುಖ್ಯರಾಗುತ್ತಾರಲ್ಲವೇ ಮತ್ತು ಎಲ್ಲವೂ - ಎಲ್ಲರೂ ಒಬ್ಬರಿಗೊಬ್ಬರು ಪೂರಕವಲ್ಲವೇ ?

ಉದಾಹಾರಣೆ, ನಮಗೆ ಹಸಿವಾದಾಗ ಹೋಟೆಲ್‌ಗಳಿಗೆ ಹೋಗುತ್ತೇವೆ. ಸುಮಾರು ನೂರು ರೂಪಾಯಿಗೆ ಹೊಟ್ಟೆ ತುಂಬುವಷ್ಟು  ಊಟ ನೀಡುತ್ತಾರೆ. ಜೀವನಕ್ಕೆ ಅತ್ಯಂತ ಅವಶ್ಯಕವಾದ ಆಹಾರವನ್ನು ಪ್ರೀತಿ ಗೌರವದಿಂದ ಉಣ ಬಡಿಸುತ್ತಾರೆ. ನಾವು ಎಂದಾದರೂ ಇದನ್ನು ಸೇವೆ ಎಂದು ಪರಿಗಣಿಸಿದ್ದೇವೆಯೇ ? ಇದೊಂದು ವ್ಯಾಪಾರ ಎಂದೇ ಸಾಮಾನ್ಯವಾಗಿ ಕರೆಯಲಾಗುತ್ತದೆ.

ಆದರೆ  ಒಬ್ಬ ಸಾಹಿತಿ, ಕಲಾವಿದ, ನಟ ನಟಿ ಸಂಭಾವನೆ ಪಡೆದು ನಟಿಸಿ ಸೇವೆ ವ್ಯಾಪ್ತಿಗೆ ಸೇರುತ್ತಾರೆ. ಸೈನಿಕ,  ವೈದ್ಯ, ಶಿಕ್ಷಕ, ವಕೀಲ  ಸಹ ಹಣ ಪಡೆದೇ ಕೆಲಸ ಮಾಡುತ್ತಾರೆ.

ಕೋವಿಡ್ ವಾರಿಯರ್ಸ್ ಎಂದು ಕೆಲವರನ್ನು ಕರೆಯುವುದು,  ಆಸ್ಪತ್ರೆಯ ‌ಹಾಸಿಗೆಯ ಮೇಲೆ  ರೋಗ ಪೀಡಿತರಾಗಿ ಮಲಗಿರುವಾಗ ವೈದ್ಯರನ್ನು, ಆಸ್ಪತ್ರೆಗಳನ್ನು ದೇವರು, ದೇವಸ್ಥಾನಗಳಿಗೆ ಹೋಲಿಸುವುದರಲ್ಲಿ ವಿಶೇಷತೆ ಇದೆಯೇ ?

Kisan 1

ಸೈನಿಕರನ್ನು ತುಂಬಾ ಹಾಡಿ ಹೊಗಳುವುದು ಸಮಂಜಸವೇ ?

ಬದುಕಿನ ಅವಶ್ಯಕತೆ, ಅನಿವಾರ್ಯತೆ, ಅಸಹಾಯಕತೆ, ಆಸಕ್ತಿ ಮುಂತಾದ ಅನೇಕ ಕಾರಣಗಳಿಗಾಗಿ ನಾವು ಒಂದೊಂದು ವೃತ್ತಿಯನ್ನು  ಆಯ್ದುಕೊಳ್ಳುತ್ತೇವೆ. ಹೊಟ್ಟೆ ಪಾಡು ಮತ್ತು ಅದಕ್ಕೆ ಬೇಕಾದ ಹಣ ಮಾಡುವುದೇ ಬಹುತೇಕ ಎಲ್ಲರ ಉದ್ದೇಶವಾಗಿರುತ್ತದೆ. ಅಲ್ಲಿ ನಾವು ನಮ್ಮ ಕರ್ತವ್ಯ ನಿರ್ವಹಿಸಲೇಬೇಕು. ಇಲ್ಲದಿದ್ದರೆ ಅಲ್ಲಿಂದ ನಮ್ಮನ್ನು ಬಿಡುಗಡೆಗೊಳಿಸಲಾಗುತ್ತದೆ ಅಥವಾ ನಮಗೆ ಹಣ ಸಿಗುವುದಿಲ್ಲ.

ಕ್ರೀಡಾಪಟುಗಳು ಸಹ ಹಣ ಪಡೆದೇ ಆಟವಾಡುತ್ತಾರೆ.

ಕ್ರೀಡಾ ಪಟುವಿಗೆ ಭಾರತ ರತ್ನ, ಹಾಡುಗಾರರಿಗೆ ಭಾರತ ರತ್ನ, ರಾಜಕಾರಣಿಗೆ ಭಾರತ ರತ್ನ, ಸಾಹಿತಿಗೆ ಭಾರತ ರತ್ನ, ವಿಜ್ಞಾನಿಗಳಿಗೆ ಭಾರತ ರತ್ನ ಹೀಗೆ ಎಲ್ಲವೂ ಸರಿ.

ಆದರೆ ಹಗಲು ರಾತ್ರಿ ಅತ್ಯಂತ ಕಡಿಮೆ ಬೆಲೆಗೆ ನಮ್ಮ ಹೊಟ್ಟೆ ತುಂಬಿಸುವ ಬೀದಿ ಬದಿಯ ವ್ಯಾಪಾರಿ ಮತ್ತು ಅಲ್ಲಿನ ಸಹಾಯಕ ಒಂದು ಸಣ್ಣ ಕೃತಜ್ಞತೆಗೂ ಅರ್ಹನಲ್ಲ, ಕಸ ಗುಡಿಸುವುದು ಸೇವೆಯಲ್ಲ.......

ಇದು ಯೋಚಿಸಬೇಕಾದ ವಿಷಯವೇ ಅಥವಾ ಅವರೆಲ್ಲರೂ ಸಾಧಕರು ಈತ ಹೊಟ್ಟೆ ಪಾಡಿನ ಸಾಧಾರಣ ವ್ಯಕ್ತಿ, ಆತನು ಆ ಗೌರವಕ್ಕೆ ಅರ್ಹನಲ್ಲ ಎಂದು ನಿರ್ಲಕ್ಷಿಸಬೇಕೆ ಅಥವಾ ಅವರವರ ವೃತ್ತಿಯ ಪ್ರಾಮುಖ್ಯತೆ ಮತ್ತು ನೈಪುಣ್ಯತೆ,‌ ಸಾಮರ್ಥ್ಯ, ಸಂಭಾವನೆ ಅವಲಂಬಿಸಿ ಗೌರವ ನಿರ್ಧಾರವಾಗುತ್ತದೆ ಎಂದು ಭಾವಿಸಬೇಕೆ ????

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ