ಸದಾ ಜನನಿಬಿಡ ಪ್ರದೇಶವಾದ ಬೆಂಗಳೂರಿನ ಚಿಕ್ಕಪೇಟೆ ಸಮೀಪದ ಕುಂಬಾರಪೇಟೆಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಹಲಸೂರು ಗೇಟ್​ ಪೊಲೀಸ್​ ಠಾಣೆ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ವಿನೋದ್​ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ ವಾಣಿಜ್ಯ ಸಂಕೀರ್ಣ ಇದ್ದು, 125 ಅಂಗಡಿಗಳು ಕಟ್ಟಡದಲ್ಲಿವೆ. ಬುಧವಾರ ಮುಂಜಾನೆ ಸುಮಾರು 6.30ರ ಸಮಯದಲ್ಲಿ ಕಟ್ಟದ ಫ್ಯಾನ್ಸಿ ಸ್ಟೋರ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿದೆ. ಈ ಅವಘಡದಲ್ಲಿ ಫ್ಯಾನ್ಸಿ ಸ್ಟೋರ್​, ಸುಗಂಧ ದ್ರವ್ಯ ಅಂಗಡಿ, ಆಟಿಕೆ, ಮುದ್ರಣ ಮತ್ತು ಹಾರ್ಡ್​ವೇರ್​ ಅಂಗಡಿಗಳು ಸೇರಿ 21 ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಮೊದಲಿಗೆ ಫ್ಯಾನ್ಸಿ ಸ್ಟೋರ್​ನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ ಸುಗಂಧ ದ್ರವ್ಯ ಮತ್ತು ಪ್ಲಾಸ್ಟಿಕ್​ ವಸ್ತುಗಳನ್ನು ಸಂಗ್ರಹಿಸಿಡಲಾಗಿದ್ದ ಹಾರ್ಡ್​ವೇರ್​ ಶಾಪ್​ಗೆ ವೇಗವಾಗಿ ಹರಡಿದೆ. ಕಿರಿದಾದ ಕಟ್ಟಡಗಳ ಒಳಗೆ ಸರಿಯಾದ ಗಾಳಿ, ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ, ಬೆಂಕಿಯ ತೀವ್ರತೆ ಕೆಲವೇ ನಿಮಿಷಗಳಲ್ಲಿ ಹೆಚ್ಚಾಗಿದ್ದರಿಂದ ಸ್ಥಳೀಯರನ್ನು ಸ್ಥಳಾಂತರಿಸಲಾಗಿತ್ತು.ಬೆಳಗ್ಗೆಯಿಂದ ಸಂಜೆ 4.30ವರೆಗೆ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ನಂದಿಸುವ ಸಮಯದಲ್ಲಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸೇರಿದಂತೆ ಮೂರಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ವಿದ್ಯುತ್​ ಶಾರ್ಟ್​ ಸರ್ಕಿಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಗ್ನಿ ಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಬೆಂಕಿ ಕಾಣಿಸಿಕೊಂಡ ಕೆಲವೇ ಹೊತ್ತಿಗೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಚಾಮರಾಜಪೇಟೆ ಅಗ್ನಿಶಾಮಕ ಠಾಣೆಯ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಕಿರಿದಾದ ರಸ್ತೆಗಳು ಹಾಗೂ ಒಂದಕ್ಕೊಂದು ಅಂಟಿಕೊಂಡಿರುವ ಕಟ್ಟಡಗಳಿಂದಾಗಿ ಅಗ್ನಿಶಾಮಕ ದಳದವರು ಸ್ಥಳಕ್ಕೆ ಪ್ರವೇಶಿಸಲು ಕಷ್ಟಕರವಾಗಿತ್ತು. ಕೊನೆಗೆ 12 ವಾಹನಗಳಿಂದ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಕೀರ್ಣವು ಕನಕಪುರ ನಿವಾಸಿ ವಿನೋದ್​ ಕುಮಾರ್​ ಅವರಿಗೆ ಸೇರಿದ್ದು, ತನಿಖೆಯ ಭಾಗವಾಗಿ ಪೊಲೀಸರು ಅವರ ಹೇಳಿಕೆಯನ್ನು ಪಡೆದುಕೊಂಡಿದ್ದು, ಸುಮಾರು 2.5 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಒಂದು ಅಂಗಡಿಯಲ್ಲಿ ಮೊದಲು ಕಾಣಿಸಿಕೊಂಡ ಬೆಂಕಿ ನಂತರ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ತಕ್ಷಣ ಕಟ್ಟಡದ ವಿದ್ಯುತ್​ ಸಂಪರ್ಕ ಕಡಿತಗೊಳಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದೆವು. ಅಂಗಡಿಗಳಲ್ಲಿ ಹಾರ್ಡ್​ವೇರ್​ ವಸ್ತುಗಳು, ಡೆಕೋರೇಷನ್​ ಸಾಮಗ್ರಿಗಳು, ಪ್ಲಾಸ್ಟಿಕ್​ ವಸ್ತುಗಳು ಸುಟ್ಟು ಹೋಗಿವೆ. ಇದು ಶಾರ್ಟ್​ ಸರ್ಕಿಟ್​ನಿಂದ ಆಗಿಬಹುದು ಎಂದು ಕಟ್ಟಡದ ಮಾಲೀಕ ವಿನೋದ್ ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ