ನಾನಿಂದು ದೇಶದ ಕಾಫೀ ಕಣಜ ಕೊಡಗಿಗೆ ಕಛೇರಿಯಿಂದ ವಿಹಾರ್ಥವಾಗಿ ಬಂದಿದ್ದೆ. ಎಲ್ಲರಂತೆ ಸುಮ್ಮನೇ ಜಾಗಗಳನ್ನು ನೋಡುತ್ತ ಹೋಗದೇ, ಅಲ್ಲಿಯ ಸಂಸ್ಕೃತಿ, ಇತಿಹಾಸ, ಭಾಷೆ ಜನರ ಬಗ್ಗೆ ತಿಳಿಯುವುದು ನನ್ನ ವಾಡಿಕೆ. ಒಂದು ಪಕ್ಷ ಅದು ಕುತೂಹಲವಾಗಿದ್ದಲ್ಲಿ ಅದನ್ನು ಎಲ್ಲರೊಡನೆ ಹಂಚಿಕೊಳ್ಳುವ ಸ್ವಭಾವ ನನ್ನದು ಇಂದು ಕೊಡಗಿನ ಕುರಿತು ವಿಚಾರಿಸುತ್ತಿದ್ದಾಗ, ಸ್ವಾತಂತ್ರ್ಯಪೂರ್ವ ಕೊಡಗೇ ಒಂದು ಸಣ್ಣ ರಾಜ್ಯವಾಗಿದ್ದು ಕೊಡಗನ್ನು ಆಳುತ್ತಿದ್ದ ಚಿಕವೀರ ರಾಜೇಂದ್ರನನ್ನು ಟಿಪ್ಪು ಸುಲ್ತಾನ್ ಮೋಸದಿಂದ ಸೋಲಿಸಿ ಸಾವಿರಾರು ಕೊಡವರನ್ನು ಹತ್ಯೆಗೈದು ಕೊಡಗನ್ನು ಮೈಸೂರು ಸಂಸ್ಥಾನಕ್ಕೆ ಸೇರಿಸಿಕೊಂಡು ಕೊಡಗಿನ ರಾಜಧಾನಿಯನ್ನು ಝಫರಾಬಾದ್ ಎಂದು ನಾಮಕರಣ ಮಾಡಿದ್ದ ಎಂದು ಕೇಳುತ್ತಿದ್ದಹಾಗೆಯೇ, ಕೊಡಗಿನ ಕೊನೆಯ ರಾಜ ಚಿಕವೀರ ರಾಜೇಂದ್ರ ಕಾದಂಬರಿಯನ್ನು ಬರೆದ ಮಾಸ್ತಿಯವರ ನೆನಪಾಯಿತು. ಮಾಸ್ತಿ , ಕನ್ನಡಿಗರ ಆಸ್ತಿ ಎಂದೇ ಖ್ಯಾತಿ ಪಡೆದಿದ್ದ ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ನೂರಾರು ಕಥೆ, ಕವನಗಳನ್ನು ಬರೆದು ಸಣ್ಣ ಕಥೆಗಳ ಜನಕ ಎಂದೇ ಪ್ರಸಿದ್ಧರಾಗಿದ್ದ ಮಾಸ್ತಿ ವೆಂಕಟೇಶ ಐಯ್ಯಂಗಾರ್ ಅವರ ಕುರಿತು ತಿಳಿಯೋಣ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಗ್ರಾಮದಲ್ಲಿ ವಾಸವಾಗಿದ್ದ ಬಲು ಸಂಪ್ರದಾಯಸ್ಥರಾದ ಶ್ರೀ ರಾಮಸ್ವಾಮಿ ಅಯ್ಯಂಗಾರ್ ಮತ್ತು ಶ್ರೀಮತಿ ತಿರುಮಲ್ಲಮ್ಮ ದಂಪತಿಗಳಿಗೆ ಜೂನ್ 6, 1891 ಜನಿಸಿದರು. ಮಾಸ್ತಿಯವರ ಮನೆಯ ಆಡು ಭಾಷೆ ತಮಿಳಾದರೂ ಮಾಸ್ತಿಯವರು ಮಾತ್ರ ಪರಿಶುದ್ಧ ಕನ್ನಡಿಗರು. ಮಾಸ್ತಿ ವೆಂಕಟೇಶ ಅಯ್ಯಂಗಾರರ ಕುಟುಂಬವನ್ನು ಪೆರಿಯಾತ್ ಮನೆತನದವರು ಎಂದು ಕರೆಯುತ್ತಿದ್ದರು. ಅಂದರೆ ದೊಡ್ಡ ಮನೆಯವರು ಎಂದರ್ಥ. ಅದರೆ ಮಾಸ್ತಿಯವರು ಹುಟ್ಟುವ ಕಾಲಕ್ಕಾಗಲೇ ಆ ಸಿರಿತನವೆಲ್ಲಾ ಕರಗಿ ಹೋಗಿ ಮನೆಯಲ್ಲಿ ಕಡು ಬಡತನವಿತ್ತು. ಅವರ ವಿದ್ಯಾಭ್ಯಾಸ ಮಾಡಿಸುವುದಕ್ಕೂ ಬಹಳ ಕಷ್ಟದ ಪರಿಸ್ಥಿತಿ ಇತ್ತು. ಅವರ ಹಿರಿಯರು ನೂರಾರು ಜನರಿಗೆ ಊಟ ಹಾಕಿದ್ದರಾದರೂ, ಮಾಸ್ತಿಯವರು, ಇತರರ ಮನೆಗಳಲ್ಲಿ ವಾರಾನ್ನದ ಮೂಲಕ ತಮ್ಮ ವಿದ್ಯಾಭ್ಯಾಸವನ್ನು ತಮ್ಮ ಸಂಬಂಧಿಗಳ ಊರುಗಳಾದ ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಇತ್ತು ಇಷ್ಟೆಲ್ಲಾ ಕಷ್ಟಗಳಿದ್ದರೂ ಓದಿನ ವಿಷಯದಲ್ಲಿ ಅದು ಅಡ್ಡಿ ಬಾರದೇ, ಎಲ್ಲಾ ಪರೀಕ್ಷೆಗಳಲ್ಲಿಯೂ ಪ್ರಥಮ ಸ್ಥಾನ ಅವರ ಕಟ್ಟಿಟ್ಟ ಬುತ್ತಿಯಾಗಿತ್ತು. ಪ್ರೌಢ ವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಚಿನ್ನದ ಪದಕದೊಂದಿಗೆ ಇಂಗ್ಲೀಷ್ ಎಂ.ಎ ಮಾಡಿಕೊಂಡ ಮಾಸ್ತಿಯವರು ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ನಂತರ ಬೆಂಗಳೂರಿಗೆ ಹಿಂತಿರುಗಿ, ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾಗಿ, ಅಂದಿನ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿಕೊಂಡರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ಮಾಸ್ತಿ ಅವರು ಸಬ್ ಡಿವಿಜನ್ ಆಫೀಸರ್, ಮ್ಯಾಜಿಸ್ಟ್ರೇಟ್ ಮತ್ತು ಕಂಟ್ರೋಲರ್ಡೆ, ಪ್ಯುಟಿ ಕಮೀಷನರ್ , ಎಕ್ಸೈಜ್ ಕಮೀಷನರ್ ಹೀಗೆ ನಾನಾ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ1943ರಲ್ಲಿ ಸ್ವಇಚ್ಛೆಯಿಂದ ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದು ತಮ್ಮ ವಿಶ್ರಾಂತ ಜೀವನವನ್ನು ಸಂಪೂರ್ಣವಾಗಿ ಕನ್ನಡ ನಾಡು ನುಡಿಯ ಸೇವೆಗೆಂದೇ ಮೀಸಲಾಗಿಟ್ಟರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....