- ರಾಘವೇಂದ್ರ ಅಡಿಗ ಎಚ್ಚೆನ್.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ,103 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 3 ಜನರಿಗೆ ಗೌರವ ಡಾಕ್ಟರೇಟ್, 72 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ರಾಜ್ಯದಲ್ಲಿ ಅತಿ ಹೆಚ್ಚು ಆರೋಗ್ಯ ವಿಜ್ಞಾನ ಕಾಲೇಜುಗಳಿವೆ. ಪ್ರತಿ ವರ್ಷ 72 ಸಾವಿರ ಆರೋಗ್ಯ ವಿಜ್ಞಾನ ಪದವೀಧರರನ್ನು ನೀಡುತ್ತಿದೆ. ವರ್ಷಕ್ಕೆ 13,940 ವೈದ್ಯರು ಪದವಿ ಪೂರೈಸುತ್ತಾರೆ  ಎಂದು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹೇಳಿದರು.

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

1001549642

ಇಲ್ಲಿ ತಯಾರಾದ ಅತ್ಯುತ್ತಮ ವೈದ್ಯರು, ಆರೋಗ್ಯ ವೃತ್ತಿಪರರು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಐಟಿ ಕ್ಷೇತ್ರದಲ್ಲಿಯೂ ನಮ್ಮ ರಾಜ್ಯ ಮುಂದಿದೆ. ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಐಟಿ ವೃತ್ತಿಪರರಿದ್ದಾರೆ. ಮಾತ್ರವಲ್ಲ, ಇತರೆ ಕ್ಷೇತ್ರಗಳಲ್ಲಿಯೂ ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ನಮ್ಮ ರಾಜ್ಯ ಹೊಂದಿದೆ.

ಬೆಂಗಳೂರು ಎಲ್ಲಾ ವಿಚಾರದಲ್ಲಿಯೂ ಜಾಗತಿಕ ಗಮನ ಸೆಳೆಯುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಬಂದಾಗ ಒಂದು ಮಾತು ಹೇಳಿದ್ದರು. ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು, ನಂತರ ದೇಶದ ಇತರೆ ಭಾಗಗಳಿಗೆ ಹೋಗುತ್ತಿದ್ದರು. ಈಗ ಕಾಲ ಬದಲಾಗಿದೆ, ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ಭಾಗಗಳಿಗೆ ಹೋಗುತ್ತಿದ್ದಾರೆ ಎಂದು. ಈ ಮಾತು ಸತ್ಯ ಎಂದು ಹೇಳಿದರು.

1001551098

*ಕಣ್ಣಿಗೆ ಕಾಣುವ ದೇವರು-ವೈದ್ಯರು*
ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಬರುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಹೋಗಬೇಕು. ಈ ವೃತ್ತಿಯಲ್ಲಿ ನಿಮಗೆ ನಿತ್ಯ ಸವಾಲು ಎದುರಾಗುತ್ತದೆ. ನಿಮ್ಮ ಮುಂದೆ ದೊಡ್ಡ ಸ್ಪರ್ಧೆ ಇದೆ. ನಾನು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿದ್ದೇನೆ. ಅಲ್ಲಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಭಾರತೀಯರು ಅದರಲ್ಲೂ ಕರ್ನಾಟಕದ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿರುವ ಗುಣಮಟ್ಟ ಭಾರತ ಮಾತ್ರವಲ್ಲ, ವಿಶ್ವದಲ್ಲೇ ಎಲ್ಲೂ ಇಲ್ಲ. ಇಲ್ಲಿ ತಯಾರಾದ ವೈದ್ಯರ ಪ್ರತಿಭೆ, ಗುಣಮಟ್ಟ, ಸೇವೆ ಹಾಗೂ ಬದ್ಧತೆಗೆ ಸರಿಸಾಟಿ ಯಾರೂ ಇಲ್ಲ ಎಂದರು.

*ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಿ, ಜನ ನಗರಗಳತ್ತ ವಲಸೆ ಬರುವುದನ್ನು ತಪ್ಪಿಸಿ*
“ಭಾರತ ಈಗ ಸಾಮಾಜಿಕ ಹಾಗೂ ತಂತ್ರಜ್ಞಾನ ಪರಿವರ್ತನೆಯ ತಿರುವಿನಲ್ಲಿದೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತ್ಯಾಧುನಿಕ ಅವಿಷ್ಕಾರ ಕಂಡಿದೆ. ನೀವು ಕೇವಲ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವುದರ ಬಗ್ಗೆ ಮಾತ್ರ ಗಮನ ಹರಿಸಬಾರದು. ಗ್ರಾಮೀಣ ಪ್ರದೇಶದಲ್ಲೂ ಆರೋಗ್ಯ ಸೇವೆ ಒದಗಿಸುವತ್ತ ಗಮನಹರಿಸಬೇಕು” ಎಂದು ಕರೆ ನೀಡಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ