ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಋತುಚಕ್ರ ರಜೆ ನೀತಿ 2025ಕ್ಕೆ (Menstrual Leave Policy, 2025) ಅ.9ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಸಂಬಂಧ ಬುಧವಾರ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದು, ವಾರ್ಷಿಕವಾಗಿ 12 ದಿನಗಳ ರಜೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒಂದು ಋತುಚಕ್ರದ ರಜೆ: ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ತಿಂಗಳಿಗೆ ಒಂದು ರಜೆ ನೀಡಲಾಗುತ್ತಿದೆ.

ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ