ನಮ್ಮ ಮೆಟ್ರೊ ಹಳಿಗೆ‌ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ‌ ಘಟನೆ ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಬೆಂಗಳೂರಿನ ನಮ್ಮ ಮೆಟ್ರೋದ ಆರ್‌ ವಿ ರಸ್ತೆ-ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದ ಹುಸ್ಕೂರು ಮೆಟ್ರೋ ನಿಲ್ದಾಣದಲ್ಲಿ ಸಂಜೆ 5:50ರಲ್ಲಿ ಈ ಘಟನೆ ನಡೆದಿದೆ.

ರಾಜೇಶ್ ಹೀರೆಮಠ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರಾಜೇಶ್ ಹಳಿಗೆ ಜಿಗಿಯುತ್ತಿದ್ದನ್ನು ಕಂಡ ಮೆಟ್ರೋ ಸಿಬ್ಬಂದಿ ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ರೈಲಿನ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ರಾಜೇಶ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಲತಃ ರಾಯಚೂರು ಮೂಲದ ರಾಜೇಶ್​, ​​ ನ್ಯೂಸ್ ಫಸ್ಟ್ ಪ್ರೈಮ್ ಯೂಟ್ಯೂಬ್ ಇಂಗ್ಲಿಷ್​ ಚಾನಲ್​ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದರು, ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಥಳಕ್ಕೆ ಹಿರಿಯ ಮೆಟ್ರೋ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಅವಘಡದಿಂದಾಗಿ ಕೆಲ ಸಮಯ ಹುಸ್ಕೂರು ಮಾರ್ಗದ ಮೆಟ್ರೋ ರೈಲುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಿಲ್ದಾಣಕ್ಕೆ ಆಗ್ನೇಯ ವಿಭಾಗ ಡಿಸಿಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ