ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಸತಿ ಶಾಲೆಗಳನ್ನು ಆರಂಭಿಸಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಮೇಲಿನ ಶಿಕ್ಷಣ ಸಂಸ್ಥೆಗಳ ನೋಡ್‌ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಶಾಲೆಗಳ ವೈಶಿಷ್ಟ್ಯತೆಗಳು, ಪ್ರವೇಶ ಪ್ರಕ್ರಿಯೆ, ಮೀಸಲಾತಿ ವಿವರ ಸೌಲಭ್ಯಗಳ ಕುರಿತಂತೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ 400ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಇದನ್ನು ಜವಾಹರ್‌ ನವೋದಯ ಶಾಲೆಗಳ ಮಾದರಿಯಲ್ಲಿ ಸ್ಥಾಪಿಸಲಾಗಿದೆ. ಆರಂಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಜನ್ಮಶತಾಬ್ದಿ ಅಂಗವಾಗಿ 4 ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಪರಿಶಿಷ್ಟ ಜಾತಿ ನವೋದಯ ಮಾದರಿ ಶಾಲೆಗಳನ್ನು ಆರಂಭಿಸಿತು. ನಂತರ ಪ್ರತಿ ಕಂದಾಯ ಜಿಲ್ಲೆಗೆ ಒಂದರಂತೆ ಶ್ರೀ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭಿಸಿತು. 1996-97ನೇ ಸಾಲಿನಿಂದ ಈವರೆಗೆ ಒಟ್ಟು 400ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ಶಾಲೆಗಳು ಆರಂಭಗೊಂಡಿವೆ.

ಪ್ರವೇಶ ಪ್ರಕ್ರಿಯೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಪ್ರತಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಕೇವಲ 50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಈ 50 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿನಿಯರಿಗೆ ಅವಕಾಶ ಕಡ್ಡಾಯವಾಗಿರುತ್ತದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮೊರಾರ್ಜಿ ದೇಸಾಯಿ ಶಾಲೆಗಳ ಸಂಖ್ಯೆ 179, ಪರಿಶಿಷ್ಟ ವರ್ಗದವರಿಗೆ 33 ವಸತಿ ಶಾಲೆಗಳಿವೆ. ಹಿಂದುಳಿದ ವರ್ಗಗಳಿಗೆ 132 ವಸತಿ ಶಾಲೆಗಳು ಅಲ್ಪಸಂಖ್ಯಾತರಿಗಾಗಿಯೇ 55 ವಸತಿ ಶಾಲೆಗಳಿವೆ. ಇದರ ಜೊತೆಗೆ ಶಿಕ್ಷಣ ಇಲಾಖೆಯಿಂದ ವರ್ಗಾವಣೆಗೊಂಡು 34 ವಸತಿ ಶಾಲೆಗಳು ಹಾಗೂ ಹುತಾತ್ಮರ ಹೆಸರಿನಲ್ಲಿ ಅಂದರೆ ಸಂಗೊಳ್ಳಿ ರಾಯಣ್ಣ ಸ್ಮಾರಕ ನಿವಾಸ ಶಾಲೆ, ಕವಿರನ್ನ ಸ್ಮಾರಕ ವಸತಿ ಶಾಲೆ, ಗಾಂಧಿ ತತ್ವ ವಸತಿ ಶಾಲೆ (ಬಾಲಕಿಯರಿಗಾಗಿ) ಹಾಗೂ ಗಾಂಧಿ ತತ್ವ ಆಧಾರಿತ ವಸತಿ ಶಾಲೆ (ಬಾಲಕರಿಗಾಗಿ) ಗಳು ಇವೆ.

ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳು

ಅರ್ಥಶಾಸ್ತ್ರಜ್ಞ ಡಾ. ಡಿ.ಎಂ. ನಂಜುಂಡಪ್ಪ ಅವರ ವರದಿಯ ಮೇರೆಗೆ ಸರ್ಕಾರ 2009-10ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ,  ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗದ ಕುಟುಂಬಗಳ ಹೆಣ್ಣುಮಕ್ಕಳಿಗಾಗಿ ಶೈಕ್ಷಣಿಕ ಹಿಂದುಳಿದ ತಾಲ್ಲೂಕುಗಳಲ್ಲಿ ತಲಾ ಒಂದೊಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳನ್ನು ಸರ್ಕಾರ ಸ್ಥಾಪಿಸಿದೆ.

ಶಾಲೆಗಳ ವೈಶಿಷ್ಟ್ಯಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಶೇಷ ಆದ್ಯತೆ.

ಈ ಶಾಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸಕ್ಕೆ ಅವಕಾಶ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ