ಧಾರವಾಡದ ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಹತ್ತು ಮಂದಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಅಮಾನತಿನಲ್ಲಿರಿಸಿ, ಮೇಲ್ಮನವಿದಾರರನ್ನು ಷರತ್ತುಬದ್ಧವಾಗಿ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಹಾಗೂ ಜಿ. ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠವು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಸಲ್ಲಿಸಲಾಗಿದ್ದ ಮಧ್ಯಂತರ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದೆ.

ಹೈಕೋರ್ಟ್ ವಿಧಿಸಿರುವ ಪ್ರಮುಖ ಷರತ್ತುಗಳೆಂದರೆ:

  • ಪ್ರತಿಯೊಬ್ಬ ಆರೋಪಿಯೂ ₹5 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರು ಭದ್ರತಾ ಜಾಮೀನುದಾರರನ್ನು ಒದಗಿಸಬೇಕು.
  • ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತವನ್ನು ಠೇವಣಿ ಇಡಬೇಕು.
  • ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ತೊರೆಯಬಾರದು.
  • ಹೈಕೋರ್ಟ್ ಅಥವಾ ವಿಶೇಷ ನ್ಯಾಯಾಲಯ ಸೂಚಿಸಿದಾಗ ಖುದ್ದಾಗಿ ಹಾಜರಾಗಬೇಕು.

ಇದೇ ಪ್ರಕರಣದಲ್ಲಿ ಏಳು ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಚನ್ನಕೇಶವ ಬಿ. ಟೆಂಗರಿಕರ್ (ಎ–19) ಅವರ ಶಿಕ್ಷೆಯನ್ನೂ ಹೈಕೋರ್ಟ್ ಅಮಾನತಿನಲ್ಲಿರಿಸಿದ್ದು, ಅವರಿಗೆ ಸಹ ಇದೇ ಷರತ್ತುಗಳೊಂದಿಗೆ ಜಾಮೀನು ನೀಡಲಾಗಿದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ರಾಜ್ಯದ ಗಮನ ಸೆಳೆದಿತ್ತು. ಎಂದಿನಂತೆ ಜಿಮ್‌ನಲ್ಲಿ ಕುಳಿತು ಪತ್ರಿಕೆ ಓದುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದರು. ಆರಂಭದಲ್ಲಿ ಪ್ರಕರಣದ ತನಿಖೆಯನ್ನು ಧಾರವಾಡದ ಸ್ಥಳೀಯ ಪೊಲೀಸರು ನಡೆಸಿದರೂ, ಪ್ರಕರಣದ ಗಂಭೀರತೆ ಹಾಗೂ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಅಂದಿನ ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (CBI) ಗೆ ವಹಿಸಿತು.

ಸಿಬಿಐ ತನಿಖೆಯ ವೇಳೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಯಿತು. ಸುಮಾರು ಹತ್ತು ವರ್ಷಗಳ ಸುದೀರ್ಘ ತನಿಖೆ, ಸಾಕ್ಷ್ಯ ಸಂಗ್ರಹ, ನೂರಾರು ದಾಖಲೆಗಳ ಪರಿಶೀಲನೆ ಹಾಗೂ ನ್ಯಾಯಾಲಯದ ವಿಚಾರಣೆಯ ನಂತರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ   ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿ ಆರೋಪಿಗಳನ್ನು ಕೊಲೆ (IPC 302), ಕ್ರಿಮಿನಲ್ ಸಂಚು (IPC 120B), ಸಾಕ್ಷ್ಯ ನಾಶ (IPC 201), ಮಾರಕಾಸ್ತ್ರಗಳಿಂದ ಹಲ್ಲೆ ಹಾಗೂ ಅಕ್ರಮ ಕೂಟ ಸೇರಿದಂತೆ ವಿವಿಧ ಆರೋಪಗಳಲ್ಲಿ ದೋಷಿಗಳೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ದೋಷಿಗಳಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ವಿವಿಧ ಶಿಕ್ಷೆಗಳನ್ನು ವಿಧಿಸಿದ್ದರು. ನಂತರ ಶಿಕ್ಷೆ ಮತ್ತು ದೋಷಾರೋಪಣೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ನ್ಯಾಯಾಂಗ ವ್ಯವಸ್ಥೆ ಕುರಿತು ಉದ್ಭವಿಸುವ ಪ್ರಶ್ನೆಗಳು

ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಮೂಲ ತತ್ವಗಳಲ್ಲಿ ಒಂದೆಂದರೆ, “ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ ಪರವಾಗಿಲ್ಲ.  ಆದರೆ, ಒಬ್ಬ ನಿರಪರಾಧಿಗೆ ಅನ್ಯಾಯವಾಗಬಾರದು.” ಈ ತತ್ವವು ನ್ಯಾಯದ ಮೂಲಭೂತ ಆತ್ಮವನ್ನು ಪ್ರತಿಬಿಂಬಿಸುತ್ತದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ