- ರಾಘವೇಂದ್ರ ಅಡಿಗ ಎಚ್ಚೆನ್.

,ನಾಡಿನ ಹೆಸರಾಂತ ವಿಶ್ವವಿದ್ಯಾಯವಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಸಾಧಕರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಚಿಂತಕ, ಶಿಕ್ಷಣ ತಜ್ಞ ಪ್ರೊ.ಜಿ.ರಾಮಕೃಷ್ಣ, ಶತಾಯುಷಿ ಸಾಹಿತಿ ಪ್ರೊ.ಸಿ.ಮಹದೇವಪ್ಪ ಮತ್ತು ನಿವೃತ್ತ ಸಾರಿಗೆ ಅಧಿಕಾರಿ ಹಾಗೂ ಸಮಾಜ ಸೇವಕ ಎಚ್.ಸಿ.ಸತ್ಯನ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ರ ಗೆಹಲೋತ್‌ ಅವರು ನಾಡೋಜ ಗೌರವ ಪ್ರದಾನ ಮಾಡುವರು ಎಂದು ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ತಿಳಿಸಿದ್ದಾರೆ.

ನಾಡೋಜ ಪ್ರಶಸ್ತಿಯು ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರತಿವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿ. ನಾಡೋಜ ಎಂಬ ಪದವು ಆದಿಕವಿ ಪಂಪನಿಗೆ ಸಂಬಂಧಿಸಿದ್ದಾಗಿದೆ. ರಾಷ್ಟ್ರಕವಿ ರವೀಂದ್ರನಾಥ ಟ್ಯಾಗೋರ್ ಅವರ ಶಾಂತಿನಿಕೇತನದಲ್ಲಿ ನೀಡಲಾಗುತ್ತಿರುವ ‘ದೇಶಿಕೋತ್ತಮ’ ಪದವಿಯ ಪ್ರೇರಣೆಯಿಂದ ಕನ್ನಡ ವಿವಿ ನಾಡೋಜ ಪದವಿ ನೀಡುತ್ತಿದೆ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ