ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಡೆಸುವ ನೀಟ್-ಯುಜಿ 2026 ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆಯು ಯಾವುದೇ ಅಕ್ರಮ ಅಥವಾ ಅಹಿತಕರ ಘಟನೆಗಳು ಸಂಭವಿಸದಂತೆ ಸುಗಮವಾಗಿ ನಡೆಯಲು ಪೊಲೀಸರು ಹಲವು ನಿಯಮಗಳನ್ನು ಜಾರಿಗೊಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.  ಆದೇಶದಂತೆ, 2026ರ ಜೂನ್ 21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆ ಸಂದರ್ಭ ನಗರದಲ್ಲಿನ ಎಲ್ಲ ಪ್ರಮುಖ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು “ನಿಷೇಧಿತ ಪ್ರದೇಶ” ಎಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರ ಅಡಿಯಲ್ಲಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

ಈ ನಿಷೇಧಾಜ್ಞೆಯ ಮುಖ್ಯ ಉದ್ದೇಶ ಪರೀಕ್ಷಾ ಪಾವಿತ್ರ್ಯತೆ ಕಾಪಾಡುವುದು ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವುದಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಪ್ರದೇಶದಲ್ಲಿ ಅನಗತ್ಯ ಜನಸಮೂಹ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು, ಪರೀಕ್ಷಾ ಸಿಬ್ಬಂದಿ ಹಾಗೂ ಅಧಿಕೃತವಾಗಿ ಅನುಮತಿ ಪಡೆದ ವ್ಯಕ್ತಿಗಳನ್ನು ಹೊರತುಪಡಿಸಿ ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಇದರ ಜೊತೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು, ಸೈಬರ್ ಮತ್ತು ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷೆಯ ಅವಧಿಯಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿಯ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪರೀಕ್ಷಾ ದಿನ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವುದು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕೂಡ ನಿಯೋಜಿಸುವ ಸಾಧ್ಯತೆ ಇದೆ.

ಪೊಲೀಸ್ ಆಯುಕ್ತರು ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಯಾವುದೇ ರೀತಿಯ ನಿಯಮ ಉಲ್ಲಂಘನೆ ಕಂಡುಬಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ