ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.

ಡಿ.ಕೆ.  ಶಿವಕುಮಾರ್ ಅವರು ಸೋಮವಾರ ಗೋಧೂಳಿ ಸಮಯದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈಗಾಗಲೇ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅದರಂತೆ ಶುಕ್ರವಾರ ಮಧ್ಯಾಹ್ನದಿಂದಲೇ  ಸಿದ್ಧತೆಗಳು ಆರಂಭವಾಗಿವೆ.

ಅಲ್ಲದೆ, ಡಿ.ಕೆ. ಶಿವಕುಮಾರ್ ಅವರ ಜೊತೆ ಉಪ ಮುಖ್ಯಮಂತ್ರಿಗಳು ಸೇರಿದಂತೆ 8 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಸಭೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದ್ದು, ನೂತನ ನಾಯಕನಾಗಿ ಡಿ.ಕೆ. ಶಿವಕುಮಾರ್ ಹೆಸರು ಅಂತಿಮವಾಗಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಲಿದ್ದು, ಕೇಂದ್ರ ನಾಯಕರಾದ ಕೆ.ಸಿ. ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರು ಅದಕ್ಕೆ ಅನುಮೋದಿಸಲಿದ್ದಾರೆ. ಬಳಿಕ ಡಿ.ಕೆ. ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಹೈಕಮಾಂಡ್ ಜೊತೆ ಚರ್ಚೆ: ಪಸ್ತುತ ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ