ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ್' ಎಂದು ಹೆಸರಿಡಲಾಗಿದೆ. ಜಮ್ಮು-ಕಾಶ್ಮೀರದ ಪೆಹಲ್‌ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಈ ದಾಳಿಯನ್ನು ನಡೆಸಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಭಾರತೀಯ ಸೇನೆಯು ಪಾಕಿಸ್ತಾನವನ್ನು ಕಟುವಾಗಿ ಟೀಕಿಸಿದೆ.

ಕಾರ್ಯಾಚರಣೆ: ಮೇ 7ರಂದು ಬೆಳಗಿನ ಜಾವ 1:05 ರಿಂದ 1:30ರ ನಡುವೆ ದಾಳಿಗಳು ನಡೆದಿವೆ. ಪಾಕಿಸ್ತಾನದ ಬಹಾವಲ್ಪುರ್ ಸೇರಿದಂತೆ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ಸಂಘಟನೆಗಳ ತರಬೇತಿ ಕೇಂದ್ರಗಳನ್ನು ನಾಶಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸುಮಾರು 70 ಭಯೋತ್ಪಾದಕರು ಹತ್ಯೆಯಾಗಿದ್ದಾರೆ.

ದಾಳಿಗಳು: ಗುಪ್ತಚರ ಮಾಹಿತಿಯ ಆಧಾರದ ಮೇಲೆ ನೆಲೆಗಳನ್ನು ಆಯ್ಕೆ ಮಾಡಲಾಗಿದೆ. ನಾಗರಿಕ ಪ್ರಾಣಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗಿದೆ. ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಲಾಗಿದ್ದು, ಪಾಕಿಸ್ತಾನದ ಸೇನಾ ನೆಲೆಗಳನ್ನು ಗುರಿಯಾಗಿಸದೆ, ಕೇವಲ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿಗಳನ್ನು ನಡೆಸಲಾಗಿದೆ.

ಆಪರೇಷನ್ ಸಿಂಧೂರ್; ಸಿಂಧೂರ ಎಂಬ ಹೆಸರು ಹಿಂದೂ ವಿವಾಹಿತ ಮಹಿಳೆಯರು ಹಣೆಗೆ ಹಚ್ಚಿಕೊಳ್ಳುವ ಕೆಂಪು ಕುಂಕುಮವನ್ನು ಸೂಚಿಸುತ್ತದೆ. ಪಹಲ್‌ಗಾವ್‌ ದಾಳಿಯಲ್ಲಿ ಪತಿಯನ್ನು ಕಳೆದುಕೊಂಡ ಮಹಿಳೆಯರ ನೋವನ್ನು ಪ್ರತಿಬಿಂಬಿಸಲು ಈ ಹೆಸರನ್ನು ಆಯ್ಕೆ ಮಾಡಲಾಗಿದೆ.

ಗುಪ್ತಚರ ಮಾಹಿತಿ : ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ 'ದಿ ರೆಸಿಸ್ಟೆನ್ಸ್ ಫ್ರಂಟ್' ಪಹಲ್‌ಗಾಮ್‌ ದಾಳಿಗೆ ಹೊಣೆ ಹೊತ್ತಿದೆ. ಕಾಶ್ಮೀರದ ಪ್ರವಾಸೋದ್ಯಮವನ್ನು ಅಸ್ಥಿರಗೊಳಿಸುವುದು ಮತ್ತು ಎರಡು ಸಮುದಾಯಗಳ ನಡುವೆ ಅಶಾಂತಿ ಸೃಷ್ಟಿಸುವುದು ಈ ದಾಳಿಯ ಉದ್ದೇಶವಾಗಿತ್ತು.

ಪತ್ರಿಕಾಗೋಷ್ಠಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಕರ್ನಲ್ ಸೋಫಿಯಾ ಖುರೇಶಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಕಾರ್ಯಾಚರಣೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ. ಅಮೆರಿಕಾ, ಬ್ರಿಟನ್, ರಷ್ಯಾ ಮತ್ತು ಸೌದಿ ಅರೇಬಿಯಾ ಸೇರಿದಂತೆ ಪ್ರಮುಖ ರಾಷ್ಟ್ರಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

ಪಾಕ್‌ ಹೇಳಿಕೆ: ನಾಗರಿಕರ ಪ್ರಾಣಕ್ಕೆ ಹಾನಿಯುಂಟಾಗಿದೆ. ನಾವು ಭಾರತದ ವಿಮಾನಗಳನ್ನು ಹೊಡೆದು ಉರಿಳಿಸಿದ್ದೇವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ, ಈ ಹೇಳಿಕೆ ಎಷ್ಟರ ಮಟ್ಟಿಗೆ ನಿಜವೆಂಬುದನ್ನು ಕಾದುನೋಡಬೇಕಿದೆ.

 

 

ಭಾರತದ ಸೇನೆಯು ಮಾಡಿರುವ ದಾಳಿಗಳನ್ನು 'ಯುದ್ಧ ರೀತಿಯ ಕಾರ್ಯಚರಣೆ' ಎಂದು ಪಾಕ್‌ ಹೇಳಿದೆ. ಪ್ರತಿದಾಳಿ ಮಾಡುವುದಾಗಿಯೂ ಎಚ್ಚರಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ