ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಪವಿತ್ರಾ ಗೌಡ ಅವರ ಮೊದಲ ಪತಿ ಸಂಜಯ್ ಸಿಂಗ್ ರಾಜಸ್ಥಾನದಲ್ಲಿ ನಿಧನರಾಗಿದ್ದಾರೆ ಎಂಬ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ಮಾಹಿತಿಯ ಪ್ರಕಾರ, ಸುಮಾರು 7 ರಿಂದ 8 ತಿಂಗಳ ಹಿಂದೆಯೇ ಸಂಜಯ್ ಸಿಂಗ್ ಕೊನೆಯುಸಿರೆಳೆದಿದ್ದರಂತೆ. ಕಳೆದ ಕೆಲವು ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ರಾಜಸ್ಥಾನದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪವಿತ್ರಾ ಗೌಡ ಅವರೊಂದಿಗಿನ ವಿಚ್ಛೇದನದ ಬಳಿಕ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮದ್ಯವ್ಯಸನಕ್ಕೆ ತುತ್ತಾಗಿದ್ದರು ಎನ್ನಲಾಗಿದ್ದು, ಇದೇ ಅವರ ಅಕಾಲಿಕ ಸಾವಿಗೆ ಕಾರಣ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದಲ್ಲಿ ಗೋರಕ್‌ಪುರ ಜಿಲ್ಲೆಯ ಮೂಲದ ಸಂಜಯ್‌ ಸಿಂಗ್‌ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಬಂಧನಕ್ಕೊಳಗಾದ ಸಂದರ್ಭದಲ್ಲಿ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಪವಿತ್ರಾ ಜೊತೆಗಿನ ತಮ್ಮ ಹಳೆಯ ದಿನಗಳು ಹಾಗೂ ದಾಂಪತ್ಯ ಜೀವನದ ವಿವರಗಳನ್ನು ಹಂಚಿಕೊಂಡಿದ್ದರು. ಅಲ್ಲದೆ, ಪವಿತ್ರಾ ಕೊಲೆ ಮಾಡುವ ಹಂತಕ್ಕೆ ಹೋಗುವಂತಹ ಹುಡುಗಿಯಲ್ಲ ಎಂದೂ ಹೇಳಿದ್ದರು. ಶಿಕ್ಷಕರಾಗಿದ್ದ ಸಂಜಯ್​ ಸಿಂಗ್, ಕಂಪ್ಯೂಟರ್ ಇನ್ಸಿಟ್ಯೂಟ್‌ ಇಟ್ಕೊಂಡಿದ್ದರು.

2007-2008ರ ಅವಧಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಸಂಜಯ್ ಮತ್ತು ಪವಿತ್ರಾ ದಂಪತಿಗೆ ಒಬ್ಬ ಮಗಳಿದ್ದಾಳೆ. ಆದರೆ ಹೊಂದಾಣಿಕೆಯ ಕೊರತೆಯಿಂದ 2011ರಲ್ಲೇ ಇವರು ಕಾನೂನಾತ್ಮಕವಾಗಿ ಡಿವೋರ್ಸ್ ಪಡೆದು ಬೇರೆಯಾಗಿದ್ದರು. ಹಲವು ವರ್ಷಗಳಿಂದ ಒಂಟಿಯಾಗಿದ್ದ ಸಂಜಯ್ ಸಿಂಗ್ ಅವರ ಈ ಅಕಾಲಿಕ ಅಂತ್ಯ ಈಗ ಎಲ್ಲರಲ್ಲೂ ಬೇಸರ ಮೂಡಿಸಿದೆ.

ಪವಿತ್ರಾಗೌಡ ಹಾಗೂ ಸಂಜಯ್​ ಸಿಂಗ್ ಸಂಬಂಧದ ಕುರಿತು ಬಹಿರಂಗ ಮಾಡಿದ್ದೇ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀ. ಪವಿತ್ರಾ ಗೌಡ ಮತ್ತು ವಿಜಯಲಕ್ಷ್ಮೀ ಅವರ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳ ವಾರ್ ಶುರುವಾಗಿತ್ತು. ಆ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಸಂಜಯ್‌ ಸಿಂಗ್‌ ಮತ್ತು ಪವಿತ್ರಾ ಗೌಡ ಅವರ ಹಳೆ ಫೋಟೋಗಳನ್ನು ತಮ್ಮ ಸಾಮಾಜಿಕ ಖಾತೆಯಲ್ಲಿ ಅಪ್‌ಲೋಡ್‌ ಮಾಡಿದ್ದರು. ಬಳಿಕ ಈ ಸುದ್ದಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ