ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ, ಸಮೀಪದಲ್ಲಿದ್ದ ಮತ್ತೊಂದು ಲಾರಿಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಸಮೀಪ ಘಟನೆ  ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕರ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ವೇಗವಾಗಿ ವ್ಯಾಪಿಸಿ, ಅದೇ ವೇಳೆ ಸಮೀಪದಲ್ಲಿ ರಿವರ್ಸ್ ಮಾಡುತ್ತಿದ್ದ ಹಾಲಿನ ಲಾರಿಗೂ ಹರಡಿದೆ. ಕೆಲವೇ ಕ್ಷಣಗಳಲ್ಲಿ ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಲಾರಿಯ ಚಾಲಕರು ವಾಹನಗಳಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅಪಘಾತ ಹಾಗೂ ಬೆಂಕಿಯಿಂದಾಗಿ ಆ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ  ಅಡಚಣೆಯಾಯಿತು.

ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣದ ಬಗ್ಗೆ ಕುರಿತು ತನಿಖೆ ಕೈಗೊಂಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ