ಗಳಗನಾಥರು
ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು. ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರಸ್ವತಿಯನ್ನು ಹೊತ್ತು ತಂದಿರುವೆ.
ಲಕ್ಷ್ಮಿಯೊಂದಿಗೆ ಸರಸ್ವತಿಯನ್ನು ಮನೆ ತುಂಬಿಸಿಕೊಳ್ಳಿ ಎಂದು ಹೇಳುತ್ತಾ, ರಾತ್ರಿ ದೇವಸ್ಥಾನದ ಅಂಗಳದಲ್ಲಿ ಮಲಗಿ, ಮಾರನೆಯ ದಿನ ಊರ ಕೆರೆ ಕಟ್ಟೆಗಳಲ್ಲಿ ಸ್ನಾನ ಮಾಡಿ, ಬೆಲ್ಲ ಕೊಬರಿ ತಿಂದುಕೊಂಡು ಊರೂರಿಗೆ ತಲೆಯ ಮೇಲೆ ಪುಸ್ತಕ ಹೊತ್ತು ಕನ್ನಡ ಸಾರಸ್ವತ ಲೋಕವನ್ನು ಮನೆ ಮನಗಳಿಗೆ ಹಂಚಿದವರು ನಮ್ಮ ಗಳಗನಾಥರು. *ಅವರು ಸತ್ತಮೇಲೆ ಅಂತ್ಯಸಂಸ್ಕಾರ ಮಾಡಲೂ ಇವರ ಮನೆಯವರ ಬಳಿ ಹಣವಿರಲಿಲ್ಲ. ಪುಸ್ತಕಗಳಿಂದಲೇ ಇವರ ಅಂತ್ಯಸಂಸ್ಕಾರ ಮಾಡಬೇಕಷ್ಟೇಯೆಂದು ಅವರ ಮನೆಯವರು ಅ ಸಂದರ್ಭದಲ್ಲಿ ನೊಂದುಕೊಂಡು ನುಡಿದಿದ್ದರು.*
ವಿ.ಸೀತಾರಾಮಯ್ಯ
ಇವರು ದಿನಾ ಬೆಳಿಗ್ಗೆ ಹೊಟೇಲಿನಿಂದ ಹತ್ತು ಇಡ್ಲಿ ತರಿಸುತ್ತಿದ್ದರಂತೆ.ಅದರಲ್ಲಿ ಒಂದು ಇಡ್ಲಿಯನ್ನಷ್ಟೇ ತಾವು ತಿಂದು ಉಳಿದ ಒಂಬತ್ತು ಇಡ್ಲಿಯನ್ನು ಪ್ರಾಣಿ ಪಕ್ಷಿಗಳಿಗೆ ತಿನ್ನಿಸುತ್ತಿದ್ದರು.
ಇದನ್ನು ಅವರು ತಮ್ಮ ಬದುಕಿನುದ್ದಕ್ಕೂ ದಿನಚರಿಯಂತೆ ಪಾಲಿಸುತ್ತಿದ್ದರು. ತಾವೂ ಬದುಕುತ್ತಾ ಎಲ್ಲವನ್ನೂ ಬದುಕಿಸಬೇಕೆಂಬ ಅವರ ನಿರ್ಮಲ ಹೃದಯ ನಮಗೆ ದಾರಿದೀಪ.
ದ.ರಾ.ಬೇಂದ್ರೆ
ಇವರೊಮ್ಮೆ ದಾರಿಯಲ್ಲಿ ನಡೆದುಕೊಂಡು ಬರಬೇಕಾದರೆ ಚಪ್ಪಲಿ ಕಿತ್ತುಹೋಗುತ್ತದೆ. ಚಪ್ಪಲಿಯನ್ನು ಕೈಯಲ್ಲಿ ಹಿಡಿದು ಸ್ವಲ್ಪ ದೂರ ನಡೆದುಕೊಂಡು ಬಂದಮೇಲೆ, ದಾರಿಪಕ್ಕ ಕೂತಿದ್ದ ಚಮ್ಮಾರ ಸಿಗುತ್ತಾನೆ. ಬಿರುಬಿಸಿಲು ಆಗಿದ್ದರಿಂದ ಬೇಂದ್ರೆ ಅಜ್ಜ ಛತ್ರಿಬಿಡಿಸಿಕೊಂಡಿದ್ದರು.
ಚಮ್ಮಾರ ತಮ್ಮ ಚಪ್ಪಲಿಯನ್ನು ರಿಪೇರಿ ಮಾಡುವಾಗ ಅವರು ತಮ್ಮ ಛತ್ರಿಯನ್ನು ಬಿಸಿಲಲ್ಲಿದ್ದ ಚಮ್ಮಾರನಿಗೆ ಹಿಡಿದಿದ್ದರು..! ಇದರಿಂದ ಮುಜುಗರಗೊಂಡ ಚಮ್ಮಾರ, *ನಾನು ದಿನಾ ಬಿಸಿಲಲ್ಲೇ ಕೂತು ಕೆಲಸ ಮಾಡುವವನು ನನಗಿದೆಲ್ಲ ಬೇಡ ಅಂದಿದ್ದಕ್ಜೆ ಬೇಂದ್ರೆ ಅಜ್ಜ ನೀನಿಗ ನಿನ್ನ ಕೆಲಸ ಮಾಡುತ್ತಿದ್ದೀಯ, ನಾನೀಗ ನನ್ನ ಕೆಲಸ ಮಾಡುತ್ತಿದ್ದೇನೆ ಅಂದರಂತೆ...!*. ಸರ್ವ ಸಮತಾ ಭಾವದ ವ್ಯಕ್ತಿತ್ವ ಅವರದಾಗಿತ್ತು.
ಡಿವಿಜಿ
ಡಿವಿಜಿಯವರು ತಮ್ಮ ಹೆಂಡತಿಯನ್ನು ಆಪ್ತರೊಬ್ಬರ ಮದುವೆಗೆ ಹೋಗಲು ಹೇಳಿ ತಾವು ಬೇರೊಂದು ಕಾರ್ಯಕ್ರಮಕ್ಕೆ ಹೋಗಿದ್ದರು.ಕಾರ್ಯಕ್ರಮ ಮುಗಿಸಿ ಮನೆಗೆ ಬಂದಾಗ ಹೆಂಡತಿ ಮನೆಯಲ್ಲಿರೋದನ್ನು ನೋಡಿ ಸಿಟ್ಟಾದ ಡಿವಿಜಿ, ಮದುವೆಗೆ ಯಾಕೆ ಹೋಗಲಿಲ್ಲವೆಂದು ಹೆಂಡತಿಯನ್ನು ಪ್ರಶ್ನಿಸಿದರು. ಅವರ ಪತ್ನಿ, *ಮಗನನ್ನು ಕಳಿಸಿದ್ದೇನೆ* ಅಂದರು.
ಡಿವಿಜಿ ಬಹಳ ಆತ್ಮೀಯರ ಮದುವೆ ಎಂದು ಹೇಳಿದ್ದೆನ್ನಲ್ಲ ನೀನೇ ಹೋಗಬೇಕಿತ್ತು ಎಂದು ಮತ್ತೊಮ್ಮೆ ಏರಿದ ಧ್ವನಿಯಲ್ಲಿ ಹೇಳಿದರು. ಆಗ ಅವರ ಪತ್ನಿ,'ನನ್ನತ್ರ ಇರೋದು ಒಂದೇ ಸೀರೆ. ಅದು ಕೂಡ ಅಲ್ಲಿ ಇಲ್ಲಿ ಹರಿದಿದೆ.ಅದನ್ನು ಉಟ್ಕೊಂಡು ಮದ್ವೆಗೆ ಹೋದ್ರೆ ನನ್ ಯಜಮಾನ್ರ ಮಾನ ಹೋಗುತ್ತೆ. ಅದ್ಕೆ ಮಗನನ್ನು ಕಳಿಸಿದೆ ಅಂದರಂತೆ. ಈ ಮಾತನ್ನು ಕೇಳಿದ ಡಿವಿಜಿಯವರಿಗೆ ಮರು ಮಾತನಾಡಲು ಅವಕಾಶವೇ ಇರಲಿಲ್ಲ.
ತಿರುಕ ನೀನು ಈ ಬ್ರಹ್ಮಪುರಿಯೊಳಗೆ,
ಸಿರಿಯಿದ್ದೊಡೇನು, ಪರಿಜನರಿದ್ದೋಡೇನು ? ಎನ್ನುವ ಮನಸ್ಸು ಅವರದಾಗಿತ್ತು.
ಮಾಸ್ತಿ
ಜಿಲ್ಲಾಧಿಕಾರಿಯಾಗಿದ್ದ ಮಾಸ್ತಿಯವರು ಒಮ್ಮೆ ಊರಭೇಟಿಗೆ ತೆರಳಿರುತ್ತಾರೆ. ದಾರಿ ಮಧ್ಯೆ ಬಾಯಾರಿಕೆ ಆದ್ದರಿಂದ ಸಾರ್ವಜನಿಕ ಬಾವಿಯಿಂದ ನೀರು ಸೇದುತ್ತಿದ್ದ ವ್ಯಕ್ತಿಯ ಬಳಿ ಒಂದು ಬೊಗಸೆ ಕುಡಿಯಲು ನೀರು ಕೇಳುತ್ತಾರೆ. ಅವನು ನೀರನ್ನು ಸೇದಿ ಮಾಸ್ತಿಯವರಿಗೆ ಕೊಡುವ ಬದಲು ಪಕ್ಕದಲ್ಲಿರುವ ಟ್ಯಾಂಕಿಗೆ ಸುರಿಯುತ್ತಾನೆ.