ಚಿನ್ನದ ಸರ ಕಸಿಯಲು ಯತ್ನಿಸಿದ ಸರಗಳ್ಳರು ಮಹಿಳೆಯೊಬ್ಬರನ್ನು ರಸ್ತೆಯಲ್ಲಿ ಎಳೆದೊಯ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ.

ಮೃತರನ್ನು ಮುಳಬಾಗಿಲು ತಾಲೂಕಿನ ತಾಯಲೂರು ಸಮೀಪದ ತಿರುಮನಹಳ್ಳಿ ನಿವಾಸಿ ರಾಧಮ್ಮ (35) ಎಂದು ಗುರುತಿಸಲಾಗಿದೆ. ಆಗಸ್ಟ್ 15ರಂದು ಮುಳಬಾಗಿಲಿನಿಂದ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ತಮ್ಮ ನಿವಾಸಕ್ಕೆ ಅವರು ಬಂದಿದ್ದರು.

ಶನಿವಾರ ಬೆಳಗ್ಗೆ ಕಾಡುಗೋಡಿ-ಬಿಸನಹಳ್ಳಿ ಸೇತುವೆ ಬಳಿ ಆಟೋರಿಕ್ಷಾದಿಂದ ಇಳಿಯುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಸಿಯಲು ಯತ್ನಿಸಿದ್ದಾರೆ.

ರಾಧಮ್ಮ ಸರವನ್ನು ಬಿಡದೆ ಪ್ರತಿರೋಧ ವ್ಯಕ್ತಪಡಿಸಿದಾಗ, ಸರಗಳ್ಳರು ಅವರನ್ನು ಸುಮಾರು 30 ಮೀಟರ್‌ವರೆಗೆ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ. ಇದರಿಂದ ಅವರ ಕುತ್ತಿಗೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ತೀವ್ರ ಗಾಯಗಳಾಗಿವೆ. ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ರಾಧಮ್ಮ ಅವರನ್ನು ದಾರಿಹೋಕರು ಮೊದಲು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಸಂಜೆ ಅವರು ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ರಾಧಮ್ಮ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ತಿರುಮನಹಳ್ಳಿ ಗ್ರಾಮಕ್ಕೆ ಕೊಂಡೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸರಗಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ