ಬೆಂಗಳೂರಿನ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ರಸ್ತೆಯಲ್ಲೇ ಕಣ್ಣೀರು ಸುರಿಸಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ, ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ ಎಂದು ಹೇಳಿದ್ದಾರೆ. .

ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾದಾಗ ನನಗೆ ಆಘಾತವಾಯಿತು ಎಂದು ರಮ್ಯಾ ಹೇಳಿದ್ದಾರೆ.

ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ. ಬೇಡ ಬೇಡ ದಯಮಾಡಿ ಹೀಗೆಲ್ಲಾ ಹಿಂಸೆ ನೀಡಬೇಡಿ, ಇಂತಹ ಅಮಾನವೀಯತೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹದೇವಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದು ಏಪ್ರಿಲ್ 16ರಂದು ಮುಂದಿನ ವಿಚಾರಣೆ ನಡೆಯಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ