ಸಾಮಾಜಿಕ ಮಾಧ್ಯಮಗಳಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅವಹೇಳನಕಾರಿ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ನಟ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ ಎಫ್ಐಆರ್ ದಾಖಲಿಸಿದ್ದಾರೆ.

ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಸೇರಿದಂತೆ 43 ಅಕೌಂಟ್ ಗಳ ವಿರುದ್ಧ ಎಫ್ಐಆರ್(FIR) ದಾಖಲಾಗಿದೆ.

ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 67, 66 ಹಾಗೂ ಬಿಎನ್ಎಸ್ 351(2), 351(3), 352, 75(1)(4), 79 ಅಡಿ ಪ್ರಕರಣ ದಾಖಲಾಗಿದೆ.

ಸಂಜೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ, ನಾನೊಂದು ಸುಪ್ರೀಂಕೋರ್ಟ್ ಆದೇಶವನ್ನು ಶೇರ್ ಮಾಡಿದ್ದೆ. ಅದಕ್ಕೆ ಪ್ರತಿಯಾಗಿ ತುಂಬಾ ಕೆಟ್ಟದಾಗಿ ಮೆಸೇಜ್ ಹಾಕಿ, ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಬದಲು ನಿಮ್ಮನ್ನು ಕೊಲೆ ಮಾಡಬೇಕಿತ್ತು. ನಿಮ್ಮನ್ನು ಅತ್ಯಾಚಾರ ಮಾಡ್ತೀವಿ ಎಂದೆಲ್ಲಾ ಸಂದೇಶ ಕಳುಹಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ