ಬ್ರಿಟೀಷರು ಭಾರತೀಯರನ್ನು ಒಡೆದು ಆಳುವ ನಿಟ್ಟಿನಲ್ಲಿ ಬಿತ್ತಿಹೋದ ಜಾತಿ ಮತ್ತು ಸಾಮಾಜಿಕ ಅಸಮಾನತೆ ಎಂಬ ಕಳೆ ಈಗ ದೇಶದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಅಸಮಾನತೆಯ ಪಿಡುಗನ್ನು ತೊಡೆದು ಹಾಕುವುದರಲ್ಲಿ ತಮ್ಮದೇನೂ ಕಿಂಚಿತ್ ಪಾತ್ರವಿರದಿದ್ದರೂ ತಮ್ಮ ಬಾಯಿ ಚಪಲ ಮತ್ತು ಸುತ್ತಮುತ್ತಲಿನ ವಂದಿಮಾಗಧರ ಚೆಪ್ಪಾಳೆಗಾಗಿ ದಲಿತರು, ಬಲಿತರು ಎಂಬ ವಿತಂಡವಾದವನ್ನು ಮಂಡಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವುತ್ತಿರುವವರೇ ಹೆಚ್ಚಾಗಿರುವಾಗ ಈ ಸಂದರ್ಭದಲ್ಲಿ ಸುಮಾರು ಸುಮಾರು 150 ವರ್ಷಗಳ ಹಿಂದೆಯೇ ದೀನ ದಲಿತರ ಸೇವೆಗಾಗಿಯೇ ತಮ್ಮ ಸರ್ವಸ್ವವನ್ನೂ ಮುಡಿಪಾಗಿಟ್ಟಿದ್ದ ಶ್ರೀ ಕುದ್ಮಲ್  ರಂಗರಾವ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ.

ಇತ್ತೀಚಿನ ಯಾವುದೇ ದೃಶ್ಯ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಕಾಣ ಸಿಗುವ ಒಂದೇ ಒಂದು ಪ್ರಮುಖ ಅಂಶವೆಂದರೆ, ಮೀಸಲಾತಿ. ಆ ಎಲ್ಲಾ ನಾಯಕರುಗಳ ಬಾಯಿಯಲ್ಲಿ ದಲಿತರು ಮತ್ತು ಅಂಬೇಡ್ಕರ್ ಬಿಟ್ಟರೆ ಬರುವ ಮೂರನೇ ಪದವೇ ಬ್ರಾಹ್ಮಣರ ವಿರೋಧ. ತಲತಲಾಂತರಗಳಿಂದಲೂ ಬ್ರಾಹ್ಮಣರು ನಮ್ಮ ಏಳಿಗೆಯನ್ನು ತಡೆದರು ಎಂಬುದಾಗಿ ಪುಂಖಾನು ಪುಂಖವಾಗಿ ಹೇಳುತ್ತಾರಾದರೂ, ಅದಕ್ಕೆ ತಕ್ಕ ಸಾಕ್ಷಿ ಮತ್ತು ಪುರಾವೆ ಗಳನ್ನು ಒದಗಿಸಿ ಎಂದು ಹೇಳಿದರೆ ಬೆಬ್ಬೆಬೇ ಎಂದು ತೊದಲುತ್ತಾರೆ. ಆದರೆ ನಿಜವಾಗಿಯೂ ಅವರು ತಿಳಿದುಕೊಳ್ಳಬೇಕಾಗಿರುವ ವಿಷಯವೇನಂದರೆ, ಭೀಮ್ ರಾವ್ ಎಂಬ ದಲಿತ ಹುಡುಗನಿಗೆ ಅವರ ಪ್ರಾಥಮಿಕ ಶಾಲೆಯ ಗುರುಗಳಾಗಿದ್ದ ಶ್ರೀ ಕೃಷ್ಣ ಕೇಶವ್ ಅಂಬೇಡ್ಕರ್ ಎಂಬ ದೇವ್ರುಖೆ ಬ್ರಾಹ್ಮಣ ಶಾಲಾ ದಾಖಲೆಗಳಲ್ಲಿ ತಮ್ಮದೇ ಆದ ಉಪನಾಮವಾದ ಅಂಬೇಡ್ಕರ್ ಎಂದು ಬದಲಾಯಿಸಿ ಅವರಿಗೆ ಸಮಾಜದಲ್ಲಿ ಸ್ಥಾನಮಾನ ಸಿಗುವಂತೆ ಮಾಡಿದ್ದರು.

ನಾನೀಗ ಹೇಳ ಹೊರಟಿರುವುದು, ದಲಿತೋದ್ಧಾರಕ ಅಂಬೇಡ್ಕರ್ ಅವರಿಗೇ ಮಾರ್ಗದರ್ಶಕರಾಗಿದ್ದ, ಜನ್ಮತಃ ಬ್ರಾಹ್ಮಣರಾಗಿದ್ದು, ದಲಿತರ ಉದ್ದಾರಕ್ಕೆಂದೇ ತಮ್ಮ ಇಡೀ ಜೀವಮಾನವನ್ನು ತೇಯ್ದ ಶ್ರೀ ಕುದ್ಮುಲ್ ರಂಗರಾವ್ ಅವರ ಬಗ್ಗೆ. ಅವಿಭಜಿತ ದಕ್ಷಿಣ ಕನ್ನಡದ ಕುದ್ಮಲ್ ಎಂಬ ಗ್ರಾಮದ ಗೌಡ ಸಾರಸ್ವತ ಬ್ರಾಹ್ಮಣ ದಂಪತಿಗಳಾದ ಶ್ರೀ ದೇವಪ್ಪಯ್ಯ ಮತ್ತು ಗೌರಿ ದಂಪತಿಗಳ ಮಗನಾಗಿ 1859 ರ ಜೂನ್ 29 ರಂಗರಾವ್ ಜನಿಸುತ್ತಾರೆ. ಮಧ್ಯಮ ವರ್ಗದ ಅವರ ತಂದೆ ದೇವಪ್ಪಯ್ಯನವರು ಅಲ್ಲಿಯ ಸ್ಥಳೀಯ ಭೂಮಾಲೀಕರೊಬ್ಬರ ಹತ್ತಿರ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು. ರಂಗರಾವ್ ಅವರಿಗೆ ಸುಮಾರು 16 ವರ್ಷವಿದ್ದಾಗ ಅವರ ತಂದೆ ಅಸುನೀಗಿದಾಗ ಅಮ್ಮ ಅಮ್ಮನ ಊರಾದ ಕಾಸರಗೋಡಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿ, ಉದ್ಯೋಗ ಹುಡುಕಿಕೊಂಡು ಮಂಗಳೂರಿಗೆ ಬಂದು ಅಲ್ಲಿಯ ಶಾಲೆಯೊಂದರಲ್ಲಿ ಮಾಸಿಕ 8 ರೂಪಾಯಿಗಳ ಸಂಬಳದ ಶಿಕ್ಷಕರಾಗಿ ಕೆಲಸ ಪ್ರಾರಂಭಿಸುತ್ತಾರೆ. ಎಷ್ಟೇ ಹಣಕಾಸಿನ ತೊಂದರೆಗಳಿದ್ದರೂ ಬಹಳಷ್ಟು ಪರಿಶ್ರಮದಿಂದ ತಮ್ಮ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಪ್ಲೀಡರ್‌ಶಿಪ್ ಪರೀಕ್ಷೆಯನ್ನು ಮುಗಿಸಿ ಮಂಗಳೂರಿನ ಸ್ಥಳೀಯ ನ್ಯಾಯಾಲಯದಲ್ಲಿ ತಮ್ಮ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಹೆಸರಿಗಷ್ಟೇ ವಕೀಲ ಅದರೆ ಅದರಿಂದ ಅವರಿಗೆ ಚಿಕ್ಕಾಸು ಹುಟ್ಟುತ್ತಿರಲಿಲ್ಲ ಕಾರಣ ಅವರ ಹತ್ತಿರ ಬರುತ್ತಿದ್ದವರೆಲ್ಲರೂ ಅರ್ಥಿಕವಾಗಿ ಕಡು ಬಡವರೇ, ಹಾಗಾಗಿ ಅವರನ್ನು ಬಡವರ ವಕೀಲ ಎಂದೇ ಎಲ್ಲರು ಕರೆಯುತ್ತಿದ್ದರು. ವಕೀಲಿತನ ಅವರ ವೃತ್ತಿಯಾಗಿದ್ದರೂ ಮಕ್ಕಳಿಗೆ ಪಾಠ ಹೇಳಿಕೊಡುವುದು ಅವರ ಪ್ರವೃತ್ತಿಯಾಗಿತ್ತು. ಶಿಕ್ಷಣವೇ ಪ್ರಗತಿಯ ಮೂಲ ಎಂಬುದು ಅವರ ಸಿದ್ಧಾಂತವಾಗಿತ್ತು. 19ನೇ ಶತಮಾನದ ಅಂತ್ಯದಲ್ಲಿ ದಲಿತರಿಗೆ ಯಾವುದೇ ಶಾಲಾ, ಸಂಸ್ಥೆಗಳಲ್ಲಿ ಮುಕ್ತ ಪ್ರವೇಶವಿರಲಿಲ್ಲದ ಕಾರಣ, ಅದೆಷ್ಟೋ ದೀನದಲಿತ ಮಕ್ಕಳು ಶಾಲೆಗಳಿಲ್ಲದೆ ಶಿಕ್ಷಣದಿಂದ ವಂಚಿತರಾಗಿರುವುದನ್ನು ಮನಗೊಂಡು ದೀನ ದಲಿತರಿಗಾಗಿ ವಕೀಲ ವೃತ್ತಿಗೆ ರಾಜಿನಾಮೆ ನೀಡಿದರು. Depressed Classes Mission ಡಿ. ಸಿ. ಎಂ. ಸಂಸ್ಥೆ ಸ್ಥಾಪಿಸಿ ಮಂಗಳೂರಿನ ಕಂಕನಾಡಿ, ಮೂಲ್ಕಿ, ಬೋಳೂರು, ಉಡುಪಿ, ಬನ್ನಂಜೆ, ನೇಜಾರು, ಅತ್ತಾವರ, ಬಾಬುಗುಡ್ಡೆ, ದಡ್ಡಲ್ ಕಾಡು ಇಲ್ಲಿ ದಲಿತರಿಗೆ ಉಚಿತ ಶಾಲೆಗಳನ್ನು ತೆರೆದು ಅವುಗಳನ್ನು ಪಂಚಮಾ ಶಾಲೆಗಳು ಎಂದು ಕರೆದರು. ಈ ಶಾಲೆಗಳಿಗೆ ಪರಿಶಿಷ್ಟ ಜಾತಿಯ ಅಧ್ಯಾಪಕರನ್ನು ನೇಮಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ದಾರಿ ದೀಪವಾಗಿದ್ದರು. ಮಕ್ಕಳುಗಳು ಶಾಲೆಗಳಿಗೆ ತಪ್ಪದೇ ಹಾಜರಾಗುವಂತೆ ಮನವೊಲಿಸಲು ತಮ್ಮ ಶಾಲಾ ಮಕ್ಕಳಿಗೆ ಅವರೇ ಸ್ನಾನ ಮಾಡಿಸಿ ಅವರನ್ನು ಸ್ವಚ್ಚವಾಗಿ ಇರುವಂತೆ ನೋಡಿಕೊಂಡರು. ಆವರ ಪೋಷಕರಿಗೆ ಅಂದಿನ ಕಾಲದಲ್ಲಿಯೇ ಕೇವಲ 2 ಪೈಸೆಗಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿದ್ದಲ್ಲದೇ ಅವರೊಂದಿಗೇ ರಂಗರಾವ್ ಊಟವನ್ನು ಮಾಡುತ್ತಿದ್ದರು ಮತ್ತು ಗುಡಿಸಲುಗಳಲ್ಲಿಯೇ ಮಲಗುತ್ತಿದ್ದರು. ಅದರಲ್ಲನೇಕರು ಇನ್ನೂ ಜೀತ ಪದ್ದತಿಯ ದಾಸ್ಯ ಜೀವನವನ್ನು ನಡೆಸುತ್ತಿದ್ದದ್ದನ್ನು ಗಮನಿಸಿ ಆ ಅನಾಗರಿಕ ಯಜಮಾನರ ಹಿಡಿತದಿಂದ ಅವರನ್ನು ಬಿಡುಗಡೆ ಗೊಳಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ