ಆರ್‌ಸಿಬಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಪ್ರಾರಂಭದಲ್ಲಿ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಈಗ ಪರಿಹಾರ ಮೊತ್ತವನ್ನು 25 ಲಕ್ಷ ರೂ.ಗೆ ಏರಿಸಿದೆ.

ಜೂನ್ 4, 2025 ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಶನಿವಾರ ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಕಟಿಸಿದೆ.

ಐಪಿಎಲ್ ಟ್ರೋಫಿ ಗೆಲುವಿನ ನಂತರ ಆರ್‌ಸಿಬಿ ಕ್ರಿಕೆಟಿಗರನ್ನು ನೋಡಲು ಸುಮಾರು ಎರಡೂವರೆ ಲಕ್ಷ ಜನರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೇರಿದ್ದಾಗ, ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿತ್ತು. ಆ ಅವ್ಯವಸ್ಥೆಯಿಂದ  11 ಜನರ ಸಾವು ಸಂಭವಿಸಿತ್ತು.  ಹಲವಾರು ಜನರು ಗಾಯಗೊಂಡಿದ್ದರು. ಕಾಲ್ತುಳಿತದ ನಂತರ, ಆರ್‌ಸಿಬಿ ಮೃತರ 11 ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿತ್ತು. ಈಗ ಆ ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗಳಿಗೆ ಏರಿಸಿದೆ.

ಶನಿವಾರ, ಭಾವನಾತ್ಮಕ ಸಂದೇಶವೊಂದರಲ್ಲಿ, ದುರಂತದ ನಂತರ ಮೊದಲ ಬಾರಿಗೆ, ಆರ್‌ಸಿಬಿ ದುಃಖವನ್ನು ಒಪ್ಪಿಕೊಂಡಿತು ಮತ್ತು ಪೀಡಿತ ಕುಟುಂಬಗಳಿಗೆ ತಮ್ಮ ಆರ್ಥಿಕ ಸಹಾಯವನ್ನು ಹೆಚ್ಚಳ ಮಾಡಿ ಘೋಷಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ