ಅವರೆಲ್ಲರೂ 20-25 ರ ವಯಸ್ಸಿನ ಆಸುಪಾಸಿನಲ್ಲಿದ್ದ‌ ವಿದ್ಯಾವಂತ ಮತ್ತು‌‌ ಬುದ್ಧಿವಂತ ಯುವಕರು. ಆ ವಯಸಿನಲ್ಲಿ ಕೆಲಸಕ್ಕೆ ‌ಸೇರಿಕೊಂಡು ಕೈ ತುಂಬಾ ಹಣ ಸಂಪಾದಿಸಿ ‌ಐಶಾರಾಮ್ಯವಾದ ಜೀವನ ನೆಡೆಸಬಹುದಿತ್ತು. ಆದರೆ ಆ ಯುವಕರು ಆಯ್ಕೆ‌ಮಾಡಿಕೊಂಡಿದ್ದು ದೇಶ ಸೇವೆ. ಮಾರ್ಚ್ 23. 1931 ರಂದು ಭಾರತ ದೇಶದ ಆ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ತಾನು ಮೊದಲು, ನಾನು ಮೊದಲು ಎಂದು ಸಂತೋಷದಿಂದ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ದಿದ ತ್ಯಾಗ ಮತ್ತು ಬಲಿದಾನದ ದಿನ.

ಸ್ವಾತಂತ್ಯ್ರ ಸಂಗ್ರಾಮದ ಸಮಯದಲ್ಲಿ ಗಾಂಧೀಯವರ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ, ಧರಣಿ ಸತ್ಯಾಗ್ರಹ ರೂಪದಲ್ಲಿ ಶಾಂತಿಯುತವಾಗಿ ಅಹಿಂಸಾ ಮಾರ್ಗವಾದ ಹೋರಾಟಗಳು ಬಿಸಿರಕ್ತದ ಅನೇಕ ತರುಣರುಗಳಿಗೆ ಇಷ್ಟವಾಗುತ್ತಿರಲಿಲ್ಲ. ಅವರದ್ದೇನಿದ್ದರೂ ದಂಡ ದಶಗುಣಂ ಭವೇತ್ ಎನ್ನುವಂತೆ ಮುಳ್ಳನ್ನು ಮುಳ್ಳಿನಿಂದಲೇ ತೆಗೆದು ಹಾಕುವಂತೆ ಬ್ರಿಟಿಯರ ವಿರುದ್ಧ ಉಗ್ರವಾದ ಹೋರಾಟವನ್ನು ಮಾಡಿಯಾದರೂ ಅವರನ್ನು ಭಾರತದಿಂದ ತೊಲಗಿಸಬೇಕೆಂದು ಉಗ್ರರೂಪದಲ್ಲಿ ಹೋರಾಟಮಾಡುತ್ತಿದ್ದ ಅನೇಕ ಯುವಕರುಗಳಲ್ಲಿ ಭಗತ್ ಸಿಂಗ್, ಚಂದ್ರಶೇಖರ ಆಝಾದ್ ರಾಜಗುರು, ಸುಖದೇವ್ ಮುಂತಾದವರು ಅಗ್ರಗಣ್ಯರು.

bhagath1

ಭಾರತೀಯರು ಕೇವಲ ಅಂಹಿಂಸಾವಾದಿಗಳಲ್ಲ. ನಮ್ಮಲ್ಲೂ ಕ್ಷಾತ್ರವಿದೆ ಎಂದು ತೋರಿಸುವ ಸಲುವಾಗಿಯೇ, ಅದೊಂದು ದಿನ ದೆಹಲಿಯ ಸೆಂಟ್ರಲ್ ಅಸೆಂಬ್ಲಿಯ ಮೇಲೆ ಭಗತ್ ಮತ್ತು ಸಹಚರರು ಕಡಿಮೆ ತಾಕತ್ತಿನ ಬಾಂಬುಗಳು ಸ್ಫೋಟಿಸಿದ್ದರು. ಈ ಸ್ಪೋಟ ಕೇವಲ ಅಲ್ಲಿ ಕಾರಿಡಾರಿನಲ್ಲಿ ನೆರೆದಿದ್ದ ಜನರನ್ನು ಬೆದರಿಸಿ ಓಡಿಸುವ ತಂತ್ರವಾಗಿತ್ತೇ ಹೊರತು ಯಾರನ್ನೂ ಬಲಿ ತೆಗೆದುಕೊಳ್ಳುವ ಉದ್ದೇಶವಿರಲಿಲ್ಲ.‌ ಹಾಗಾಗಿಯೇ ಭಬಾಂಬ್ ಸ್ಪೋಟಿಸಿದ ನಂತರ ಅವರು ತಪ್ಪಿಸಿಕೊಂಡು ಓಡಿ‌ಹೋಗದೇ ಅಲ್ಲಿಯೇ ನಿಂತರಲ್ಲದೇ ಸ್ವಪ್ರೇರಣೆಯಿಂದ ಪೋಲಿಸರಿಗೆ ಶರಣಾದರು.

bhagath3

ಭಾರತೀಯರಿಂದ ಏಕಾಏಕಿ ಇಂತಹ ಉಗ್ರ ಪ್ರತಿಭಟನೆಯನ್ನು ನಿರೀಕ್ಷಿಸಿರದಿದ್ದ ಬ್ರಿಟೀಷರಿಗೆ, ಇಂತಹ ಕೃತ್ಯಗಳನ್ನು ಆರಂಭದಲ್ಲೇ ಚಿವುಟದಿದ್ದರೆ ಅವರ ಮುಂದೆ ನಾವು ಅಸಹಾಯಕರು ಎಂದು ತೋರಿಸಿಕೊಂಡಂತೆ ಆಗುತ್ತದೆ ಎಂಬುದನ್ನು ಮನಗಂಡು‌ ಆನಕೂಡಲೇ ತೀವ್ರತರವಾದ ತನಿಖೆ ನಡೆಸಿ, ಕಡೆಗೆ ಈ ಕೃತ್ಯದ ಕಾರಣೀಭೂತರದಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಬಂಧಿಸಿ ಸಾಮಾನ್ಯ ಖೈದಿಗಳ ಜೊತೆಯಲ್ಲಿ ಸೆರೆಮನೆಗೆ ತಳ್ಳುತ್ತಾರೆ ಮತ್ತು ಅವರಿಗೆ‌ ಅತ್ಯಂತ‌ ಕ್ರೂರವಾದ ಮರಣದಂಡನೆಯ ಶಿಕ್ಷೆಯನ್ನು ವಿಧಿಸುತ್ತಾರೆ.

bhagath5

ಇದನ್ನು ತೀವ್ರತರವಾಗಿ ಖಂಡಿಸಿದ ಭಗತ್ ಸಿಂಗ್ ನಮ್ಮನ್ನು ನೇಣಿಗೆ ಹಾಕಬೇಡಿ ಎಂದು ಅಂದಿನ ಪಂಜಾಬ್ ಪ್ರಾಂತ್ಯದ ಗವರ್ನರ್ ಗೆ ಪತ್ರ ಬರೆಯುತ್ತಾರೆ. ಹಾಗೆಂದ ಮಾತ್ರಕ್ಕೆ ಆ ಪತ್ರ ಹೇಡಿಯಂತೆ ಕ್ಷಮಾಪಣಾ ಪತ್ರವಾಗಿರಲಿಲ್ಲ ಬದಲಾಗಿ ಕೆಚ್ಚೆದೆಯ ಆತ್ಮವಿಶ್ವಾಸದ ದೇಶಪ್ರೇಮಿಯಾದ ಒಬ್ಬ ನೈಜ ಯೋಧನ ಅಪ್ರತಿಮ ಶೌರ್ಯ ಸ್ವಾಭಿಮಾನದ ಪ್ರತೀಕದಂತಿತ್ತು ಆ ಪತ್ರವನ್ನು ಮುಂದುವರಿಸುತ್ತಾ , ನಾವು ಸ್ವಾತಂತ್ರ್ಯ ಸಂಗ್ರಾಮದ ಸ್ವಾಭಿಮಾನೀ ಸೈನಿಕರು, ಕೆಚ್ಚೆದೆಯ ಕ್ರಾಂತಿಕಾರಿಗಳು, ನಾವು ಅಪರಾಧಿಗಳಲ್ಲಾ. ನಾವು ಕ್ರಿಮಿನಲ್ ಗಳಲ್ಲಾ . ಹಾಗಾಗಿ ನಮಗೆ ಗೌರವಾರ್ಹವಾದ ವೀರ ಯೋಧರ ಸಾವು ಬೇಕು. ಭಾರತಮಾತೆಯ ಸೇವೆಗಾಗಿ ಪ್ರಾಣವನ್ನರ್ಪಿಸಲು ಸಂತೋಷದಿಂದ ನಾವೆಲ್ಲಾ ಸಿದ್ಧರಿದ್ದೇವೆ. ಆದರೆ…ಸುಖಾ ಸುಮ್ಮನೆ ಯಾವುದೋ ಪ್ರಕರಣಗಳಲ್ಲಿ ಸಿಕ್ಕಿಬಿದ್ದು ಶಿಕ್ಷೆಗೆ ಗುರಿಯಾದ ಅಪರಾಧಿಗಳಂತೆ ನಮ್ಮನ್ನು ನೇಣಿಗೆ ಹಾಕಬೇಡಿ. ನಾವು ವೀರಮರಣವನ್ನಪ್ಪಲು ಸದಾ ಹಾತೊರೆಯುತ್ತಿದ್ದೇವೆ. ಹಾಗಾಗಿ ಯುದ್ಧದಲ್ಲಿ ಸೈನಿಕರನ್ನು ಶೂಟ್ ಮಾಡುವಂತೆ ನಮ್ಮನ್ನೂ ಬಂದೂಕುಗಳಿಂದ ಸುಟ್ಟು ಸಾಯಿಸಿ ಅಥವಾ ಫಿರಂಗಿಯ ಗುಂಡಿಟ್ಟು ಉಡಾಯಿಸಿ. ನಾವು ತುಪಾಕಿಯ ಬಾಯಿಗೆ, ಫಿರಂಗಿಯ ಗುಂಡಿಗೆ ಪ್ರಾಣವನ್ನರ್ಪಿಸುವ ಗುಂಡಿಗೆಯಿರುವ ಗಂಡುಗಲಿಗಳು, ಹಾಗಾಗಿ ಹೇಡಿಗಳಂತೆ ನೇಣಿಗೆ ಕೊರಳೊಡ್ಡುವ ಬದಲಿಗೆ ಬಂದೂಕಿಗೆ ಎದೆಯೊಡ್ಡಿ ಸಾಯುತ್ತೇವೆ. ಎನ್ನುವಂತಹ ಕ್ಷಾತ್ರ ತೇಜದ ವೀರಯೋಧರುಗಳು ಮರೆಯುವಂತಹ ಪತ್ರವನ್ನು ಭಗತ್ ಸಿಂಗ್ ಮತ್ತವರ ಗೆಳೆಯರು ಬರೆದಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ