ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಅವರು ಮೃತಟಪಟ್ಟಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾಗಿದ್ದ ಅವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.

ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿದಂತೆ 2019ರಲ್ಲಿ ಪದ್ಮಶ್ರೀ ಪ್ರಶಸ್ತಿಗೂ ಪಾತ್ರರಾಗಿದ್ದರು. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರಿಂದ ಸಂತಾಪ ಸೂಚಿಸಿದ್ದಾರೆ.

ರಸ್ತೆ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ‘ಮರಗಳೇ ನನ್ನ ಮಕ್ಕಳು’ ಎಂದು ಘೋಷಿಸಿದ ವೃಕ್ಷಮಾತೆ, ನಮ್ಮ ಹೆಮ್ಮೆಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಪರಿಸರ ಸೇವೆಯನ್ನೇ ಮಾದರಿಯಾಗಿಸಿಕೊಂಡು ನಮ್ಮ ಸುತ್ತಮುತ್ತಲಿನ ಪರಿಸರವನ್ನ ಉಳಿಸಿ, ಬೆಳೆಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ಸಂತಾಪ ಸೂಚಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ