ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶೈಲಜಾ ಶ್ರೀಶೈಲನ್ ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಹಿರಿಯ ನಟ ಶ್ರೀಶೈಲನ್ ಪತ್ನಿಯಾಗಿದ್ದ ಶೈಲಜಾ ದಶಕಗಳ ಕಾಲ ಸ್ಯಾಂಡಲ್‌ವುಡ್ ಮತ್ತು ಕಿರುತೆರೆಯಲ್ಲಿ ಕೆಲಸ ಮಾಡಿದ್ದರು.

ನಟಿ ಶೈಲಜಾ ಶ್ರೀಶೈಲನ್ ಅವರು ಎ, ಉಪ್ಪಿ 2, ಅನಂತನ ಅವಾಂತರ, ಪುಟ್ಟ ಹೆಂಡ್ತಿ, ಗೃಹಪ್ರವೇಶ ಹಾಗೂ ಬಾರೆ ನನ್ನ ಮುದ್ದಿನ ರಾಣಿ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಅವರ ಬಹುತೇಕ ಚಿತ್ರಗಳಲ್ಲಿ ಶೈಲಜಾ ಅವರು ತಾಯಿ ಸೇರಿದಂತೆ ಪ್ರಮುಖ ಪೋಷಕ ಪಾತ್ರಗಳಿಗೆ ಜೀವ ತುಂಬಿದ್ದರು.

ಟಿ. ಎನ್. ಸೀತಾರಾಮ್ ನಿರ್ದೇಶನದ ಅತ್ಯಂತ ಜನಪ್ರಿಯ ಮೆಗಾ ಸೀರಿಯಲ್‌ಗಳಾದ ಮಾಯಾಮೃಗ, ಮುಕ್ತ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿ ಮನೆಮಾತಾಗಿದ್ದರು. ಮೃತರು ಪುತ್ರ ಶ್ರೀಕಾಂತ್, ಪುತ್ರಿ ಶ್ರೀವಾಣಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ