ವಿಜಯಪುರ ನಗರದ ಭೂತನಾಳ ಕೆರೆಯಲ್ಲಿ ಇಂದು ಬುಧವಾರ ಬೆಳಗ್ಗೆ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು ಆರು ಮೃತದೇಹಗಳು ತೇಲುತ್ತಿರುವುದು ಕಂಡುಬಂದಿದೆ.

ಮುಂಜಾನೆ ವಾಯುವಿಹಾರಕ್ಕೆ ಬಂದವರು ಕೆರೆಯ ದಂಡೆಯ ಬಳಿ ಮೃತದೇಹಗಳನ್ನು ಕಂಡು ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಬಾಲಕರ ಮೃತದೇಹಗಳಾಗಿವೆ. ಅವರ ಗುರುತು ಹಾಗೂ ವಾಸಸ್ಥಳದ ವಿವರಗಳು ತಿಳಿದುಬಂದಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಆದರ್ಶ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಸಂತ್ರಸ್ತರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಡಿವೈಎಸ್​ಪಿ ನಾಗರಾಜ್, ಆದರ್ಶ ನಗರ ಠಾಣೆ ಪಿಎಸ್​​ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಭೇಟಿ ನೀಡಿ, ಶವಗಳನ್ನು ಕೆರೆಯಿಂದ ಹೊರ ತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೃತರ ಹೆಸರು, ವಿಳಾಸ ಇನ್ನೂ ತಿಳಿದು ಬಂದಿಲ್ಲ. ಕೆರೆಯ ಅಂಚಿನಲ್ಲಿ ತೇಲಿ ಬಂದ ಶವಗಳ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಬಳಿಕ ನಿಖರ ಮಾಹಿತಿ ತಿಳಿದು ಬರಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ