ಬೆಂಗಳೂರು ಟೆಕ್ ಸಮ್ಮಿಟ್ ಮಾದರಿಯಲ್ಲಿ ಇದೇ ನವೆಂಬರ್‌ನಲ್ಲಿ ಸ್ಕಿಲ್ ಸಮ್ಮಿಟ್ ಆಯೋಜಿಸಲಾಗುತ್ತದೆ. ನವೆಂಬರ್ 4, 5, 6ರಂದು ಈ ಶೃಂಗಸಭೆ ಆಯೋಜಿಸಲಾಗಿದೆ ಎಂದು ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ದಸರಾ ಬಳಿಕ ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಇದರ ನೋಂದಣಿ ಕಾರ್ಯ ಶೀಘ್ರದಲ್ಲೇ ಆರಂಭವಾಗುತ್ತದೆ. ಈ ಉದ್ಯೋಗ ಮೇಳದ ಪೋಸ್ಟರ್ ಅನ್ನೂ ಬಿಡುಗಡೆ ಮಾಡಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.
ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ನರ್ಸಿಂಗ್ ಶೃಂಗಸಭೆಯನ್ನೂ ಆಯೋಜಿಸುತ್ತಿದ್ದೇವೆ. ನಂತರ ವಿದೇಶದಲ್ಲಿ ರೋಡ್ ಶೋ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ಆದ್ಯತೆ ನೀಡಲಾಗಿದೆ ಎಂದು ಡಾ. ಶರಣಪ್ರಕಾಶ್ ಪಾಟೀಲ್ ವಿವರಿಸಿದರು.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ