ಭಾರತ ತಂಡದ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮದುವೆ ಕುರಿತಾದ ಊಹಾಪೋಹಗಳಿಗೆ ತೆರೆಬಿದ್ದಿದ್ದು, ಅವರು ಸಧ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂದು ಅವರ ಗೆಳೆಯ , ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಸ್ಪಷ್ಟಪಡಿಸಿದ್ದಾರೆ.
ಪಾಲಶ್ ಮುಚ್ಛಲ್ ಇಂದೋರ್ ಸ್ಟೇಟ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಪಾಲಶ್ ಮುಚ್ಛಲ್ ಸಂಗೀತ ನಿರ್ದೇಶಕರಾಗಿದ್ದು, ಕಾರ್ಯಕ್ರಮದಲ್ಲಿ ಸ್ಮೃತಿಯೊಂದಿಗಿನ ಸಂಬಂಧದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ತಾವಿಬ್ಬರು ಶೀಘ್ರದಲ್ಲೇ ಇಂದೋರ್ನಲ್ಲಿ ಮದುವೆಯಾಗುತ್ತೇವೆ ಎಂದು ಹೇಳುವ ಮೂಲಕ ತಮ್ಮ ಸಂಬಂಧದ ಬಗ್ಗೆ ಖಚಿತಪಡಿಸಿದ್ದಾರೆ.ಸ್ಮೃತಿ ಮಂಧಾನ ಭಾರತ ಮಹಿಳಾ ತಂಡದ ಉಪನಾಯಕಿಯಾಗಿದ್ದು, ಲೆಫ್ಟ್‌ಹ್ಯಾಂಡ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಪಲಾಶ್ ಮುಚ್ಛಲ್ ಅವರೊಂದಿಗೆ ಪ್ರೀತಿ ಸಂಬಂಧದ ಗಾಸಿಪ್ಗಳು ಕೇಳಿಬರುತ್ತಲೇ ಇದ್ದವು. ಇಬ್ಬರೂ ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆದರೆ ಮೊದಲ ಬಾರಿ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಸ್ಮೃತಿ ಅವರು ಸದ್ಯ ಇಂದೋರ್‌ನಲ್ಲಿದ್ದು, ಐಸಿಸಿ ಮಹಿಳೆಯರ ಏಕದಿನ ವಿಶ್ವಕಪ್ 2025ರಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.