ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಗಮನ ನೀಡಬೇಕಾದ ಅಗತ್ಯವಿದೆ. ಆಶ್ರಮ ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಗುಣಮಟ್ಟದ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ತಿಳಿಸಿದರು.

ಸರಗೂರು ಮತ್ತು ಎಚ್.ಡಿ. ಕೋಟೆ ತಾಲೂಕು ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರು ವಾಸಿಸುತ್ತಿರುವ ಹಾಡಿಗಳಿಗೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ / ಆಶ್ರಮ ಶಾಲೆಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಹಾಡಿಗಳ ಭೇಟಿಯ ಸಂದರ್ಭದಲ್ಲಿ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಬುಡಕಟ್ಟು ಸಮುದಾಯದ ಹಿತರಕ್ಷಣೆ ಮತ್ತು ಸಮಗ್ರ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದರು.ಹಾಡಿ ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಫಲ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ, ಬೋರ್‌ವೆಲ್‌ ಹಾಳಾದಾಗ ತಕ್ಷಣದ ಪರಿಹಾರ ಕ್ರಮಗಳು, ಸಾಮೂಹಿಕ ಬೋರ್‌ವೆಲ್‌ಗಳ ಅಗತ್ಯ ಹಾಗೂ ಅರಣ್ಯ ಪ್ರದೇಶದೊಳಗಿನ ಬೋರ್‌ವೆಲ್‌ಗಳಿಗೆ ವಿದ್ಯುತ್/ಸೌರಶಕ್ತಿ ಸಂಪರ್ಕ ಕಲ್ಪಿಸಬೇಕು ಎಂದರು.

ಹಾಡಿಗಳಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಜನರಿಗೆ ಸರ್ಕಾರದ ಸೌಲಭ್ಯಗಳು ಮತ್ತು ದಾಖಲೆಗಳು ಸುಲಭವಾಗಿ ತಲುಪಬೇಕು. ಅಧಿಕಾರಿಗಳು ನೆಪ ಹೇಳದೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ರಘುಮೂರ್ತಿ ಹೇಳಿದರು.

ಯೋಜನೆಗಳು  ಜನರನ್ನು ತಲುಪಲು ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಧಾರ್ ಕಾರ್ಡ್, ರೇಷನ್ ಕಾರ್ಡ್, ಹಕ್ಕುಪತ್ರ ಮತ್ತು ಪಹಣಿ  ಸಮಸ್ಯೆಗಳನ್ನು ಬಗೆಹರಿಸಿ, ಹಾಡಿಗಳ ಒಳಗಿನ ಕುಗ್ರಾಮಗಳಿಗೂ  ಸರ್ಕಾರದ ಸೌಲಭ್ಯಗಳು ತಲುಪುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.

ಹಾಡಿಗಳಲ್ಲಿನ ರಸ್ತೆ, ಕುಡಿಯುವ ನೀರು, ವಸತಿ, ವಿದ್ಯುತ್ ಹಾಗೂ ಆರೋಗ್ಯ ಸೌಲಭ್ಯಗಳ ಸ್ಥಿತಿಗತಿ ಕುರಿತು ನಿವಾಸಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ನಿರ್ದೇಶಕರು ಡಾ.ಅಶೋಕ್ ಡಿ.ಆರ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಶೋಕ್‌ ದುಡಗಂಟಿ ಮತ್ತಿತರರು ಉಪಸ್ಥಿತರಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ