ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಹೈವೆಯಿಂದ ಸರ್ವೀಸ್ ರಸ್ತೆಗೆ‌ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತಪಟ್ಟಿದ್ದಾರೆ. ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಗಾಯಗಳಾಗಿವೆ.

ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ‌ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರುಗಳು 15 ದಿನಗಳ ಪ್ರವಾಸಕ್ಕೆಂದು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ‌ ಪ್ರವಾಸದ ಪ್ಲಾನ್ ಮಾಡಿದ್ದರು.12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ವಿಮಾನದಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿದ್ದರು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್​​ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್​​ಪೋರ್ಟ್​​ನ ಟರ್ಮಿನಲ್​​ ದಾರಿಯ ಬಗ್ಗೆ ಸರಿಯಾಗಿ ತಿಳಿಯದ ಕಾರಣ ಟಿಟಿ ಚಾಲಕ ಗೂಗಲ್ ಮ್ಯಾಪ್ ಹಾಕಿಕೊಂಡು ವಾಹನ ಚಾಲನೆ ಮಾಡುತ್ತಿದ್ದ.

ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್​​ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಸಾಗಿದ್ದ. ಟಿಟಿ ವಾಹನ ಮುಂದಿನ ಟರ್ನಿಂಗ್​​ನಲ್ಲಿ ಯೂಟರ್ನ್​​ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್​ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ