ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಎಕ್ಸ್​​ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಹಾಗೂ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ.

ಮೃತರನ್ನು ಇರ್ಫಾನಾ (52) ಹಾಗೂ ಮೊಮ್ಮಕ್ಕಳಾದ ರುಕಿಯಾ (13) ಮತ್ತು ರಾಕಿಯಾ (08) ಎಂದು ಗುರುತಿಸಲಾಗಿದೆ. ಮೃತರು ಮುತ್ತೂರು ಕಡೆಯಿಂದ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೂವರೂ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಬರುತ್ತಿದ್ದರು. ಎರಡು ಹಳಿಗಳಿದ್ದು, ತಿರುವಿನಲ್ಲಿ ರೈಲು ಬರುತ್ತಿರುವುದು ಗಮನಕ್ಕೆ ಬಂದಿಲ್ಲ. ವೇಗವಾಗಿ ಬಂದ ಎಕ್ಸ್​ಪ್ರೆಸ್ ರೈಲು ಮೂವರ ಮೇಲೆ ಹರಿದಿದ್ದು, ಮೂವರ ದೇಹಗಳೂ ದಿಕ್ಕಾಪಾಲಾಗಿ ಬಿದ್ದಿವೆ.

ರಜೆ ಇದ್ದಕಾರಣ, ಮೊಮ್ಮಕ್ಕಳು ಹಿಂದೂಪುರದಿಂದ ಅಜ್ಜಿಯ ಮನೆಯಾದ ಮುತ್ತೂರಿಗೆ ಬಂದಿದ್ದರು. ಬೆಳಗ್ಗೆ ಹಿಂದೂಪುರಕ್ಕೆ ಹೋಗಲು ಅಜ್ಜಿಯ ಜೊತೆ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ