ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದೆ

ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆ ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ಈ ಕುರಿತು ಪ್ರಕಟಣೆಯಲ್ಲಿ ಸಂಸದ ಯದುವೀರ್, ಮೈಸೂರಿನಿಂದ ರಾಜಸ್ತಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ರಾಜಸ್ತಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಯದುವೀರ್‌ ಒಡೆಯರ್‌ ಮನವಿ ಮಾಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ