ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಘಟನೆ ನಡೆದಿದೆ. ಎಂ.ಜಿ. ಮನೋಜ್​ (19) ಹಾಗೂ ಎಂ.ಜಿ. ಪ್ರಜ್ವಲ್ (18) ಮೃತ ಸಹೋದರರು. ತಂದೆಯ ಕಣ್ಣೆದುರೇ ಅಣ್ಣ-ತಮ್ಮ ಪ್ರಾಣ ಬಿಟ್ಟಿದ್ದಾರೆ.

ತಂದೆಯೊಂದಿಗೆ ತುಂಗಭದ್ರಾ ನದಿಗೆ ಮೂವರು ಸಹೋದರರು ಈಜಲು ತೆರಳಿದ್ದರು. ಇಬ್ಬರು ಸಹೋದರರು ಆಯತಪ್ಪಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ತಂದೆ ಮಂಜಪ್ಪ ಅವರ ಸಮಯ ಪ್ರಜ್ಞೆಯಿಂದ ಕೊನೆಯ ಮಗ ಚಿರಂಜೀವಿ ಸಾವಿನಿಂದ ಪಾರಾಗಿದ್ದಾನೆ.

ಎಂ.ಜಿ.ಮನೋಜ್​ ಹಾಸನದ ಸರ್ಕಾರಿ ಎಂಜಿನಿಯರಿಂಗ್​ ಕಾಲೇಜಿಲ್ಲಿ ಮೊದಲ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದರೆ, ಪ್ರಜ್ವಲ್​ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ. ಇವರು ಗ್ರಾಮದಲ್ಲಿ ನಡೆದ ಆಂಜನೇಯ ಸ್ವಾಮಿ ರಥೋತ್ಸವಕ್ಕೆ ಆಗಮಿಸಿದ್ದರು. ಸ್ನಾನಕ್ಕೆಂದು ನದಿಗೆ ಇಳಿದಾಗ ಆಳ ತಿಳಿಯದೆ, ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ