ಹಾಸ್ಯ ಕಲಾವಿದ ಉಮೇಶ್​ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್​, ವಿರೋಧ ಪಕ್ಷದ ನಾಯಕ ಆರ್​.ಅಶೋಕ್, ಚಿತ್ರೋದ್ಯಮ​ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಸಿಎಂ ಸಿದ್ಧರಾಮಯ್ಯ, ಕನ್ನಡ ಚಿತ್ರರಂಗ ಹೆಸರಾಂತ ಹಾಸ್ಯನಟ ಉಮೇಶ್​ ನಿಧನದ ಸುದ್ದಿ ನೋವು ತಂದಿಎ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು ಎಂದು ಸಂತಾಪ ಸೂಚಿಸಿದ್ದಾರೆ.

ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್, ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟರಾದ ಎಂ.ಎಸ್ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಉಮೇಶ್ ಅವರು ಕನ್ನಡ ಚಿತ್ರರಂಗಕ್ಕೆ ಅತಿದೊಡ್ಡ ಕೊಡುಗೆ ನೀಡಿದ್ದರು. ನಾಗರ ಹೊಳೆ, ಗುರು ಶಿಷ್ಯರು, ಅನುಪಮಾ, ಕಾಮನಬಿಲ್ಲು, ಅಪೂರ್ವ ಸಂಗಮ, ಶ್ರುತಿ ಸೇರಿದಾಗ, ಹಾಲು ಸಕ್ಕರೆ, ಗೋಲ್​ಮಾಲ್ ರಾಧಾಕೃಷ್ಣ ಅವರ ಪ್ರಮುಖ ಸಿನಿಮಾಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದೇವರು ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಸರಿಸುಮಾರು 6 ದಶಕಗಳ ಕಾಲ ಕನ್ನಡ ಸಿನಿ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿದ ಶ್ರೀ ಉಮೇಶ್ ಅವರು ಸ್ಯಾಂಡಲ್ ವುಡ್ ನ ಬಹುತೇಕ ಎಲ್ಲಾ ದಿಗ್ಗಜ ನಟರೊಂದಿಗೂ ಬೆಳ್ಳಿ ಪರದೆ ಹಂಚಿಕೊಂಡು 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ತಮ್ಮ ಹಾಸ್ಯಭರಿತ ನಟನೆ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದ ಉಮೇಶ್ ಅವರ ಕಾಯ ಅಳಿದರೂ ಅವರ ಚಲನಚಿತ್ರಗಳ ಮೂಲಕ ಕನ್ನಡಿಗರ ಜನಮಾನಸದಲ್ಲಿ ಅವರು ಸದಾ ಜೀವಂತ. ಶೋಕತಪ್ತ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ ವಿಪಕ್ಷ ನಾಯಕ ಆರ್. ಅಶೋಕ್​.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ