ಕರ್ನಾಟಕಕ್ಕೆ ಘೋಷಣೆಯಾದ ಹೊಸ ವಂದೇ ಭಾರತ್‌ ಸ್ಪೀಪರ್‌ ರೈಲಿನ ಸಂಚಾರ ಮಾರ್ಗ ಖಚಿತವಾಗಿದೆ. ಈ ರೈಲು ಬೆಂಗಳೂರು - ಮುಂಬೈ ನಡುವೆ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಮೂಲಕ ಸಂಚಾರ ನಡೆಸಲಿದೆ.

ಬಹುನಿರೀಕ್ಷಿತ ವಂದೇ ಭಾರತ್‌ ಸ್ಲೀಪರ್‌ ರೈಲನ್ನು ರಾಜ್ಯಕ್ಕೆ ನೀಡುವುದಾಗಿ 2 ದಿನಗಳ ಹಿಂದೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಘೋಷಿಸಿದ್ದರು. ಆದರೆ, ರೈಲು ಸಂಚಾರ ಮಾರ್ಗ ಯಾವುದು ಎಂಬುದನ್ನು ಖಚಿತ ಪಡಿಸಿರಲಿಲ್ಲ. ಬೆಂಗಳೂರು ಹುಬ್ಬಳ್ಳಿ ಬೆಳಗಾವಿ, ಪುಣೆ ಮಾರ್ಗವೋ ಅಥವಾ ಬೆಂಗಳೂರು ಕಲಬುರಗಿ ಸೊಲ್ಲಾಪುರ ಪುಣೆ ಮಾರ್ಗವೋ ಎಂಬ ಗೊಂದಲ ಪ್ರಯಾಣಿಕರಲ್ಲಿತ್ತು. ಸದ್ಯ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಟ್ವೀಟ್‌ ಮಾಡಿ ಖಚಿತಪಡಿಸಿದ್ದಾರೆ.

ಬೆಂಗಳೂರು ಮುಂಬೈ ವಂದೇ ಭಾರತ್‌ ಸ್ಲೀಪರ್ ಕೆಎಸ್‌ಆರ್‌ ಬೆಂಗಳೂರಿನಿಂದ ಹೊರಟು ಯಲಹಂಕ, ಅನಂತಪುರ, ಗುಂತಕಲ್‌, ಮಂತ್ರಾಲಯಂ ರಸ್ತೆ, ರಾಯಚೂರು, ಯಾದಗಿರಿ, ಕಲಬುರಗಿ, ಸೊಲ್ಲಾಪುರ, ದೌಂಡ್‌ ಜಂಕ್ಷನ್‌, ಪುಣೆ ಜಂಕ್ಷನ್, ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ ತಲುಪಲಿದೆ. ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದರೆ ರಾಯಚೂರು, ಯಾದಗಿರಿ, ಕಲಬುರಗಿ ಸೇರಿ 3 ಜಿಲ್ಲೆಗೆ ಮಾತ್ರ ಅನುಕೂಲವಾಗಲಿದೆ.

ಕರ್ನಾಟಕಕ್ಕೆ ಸಿಕ್ಕ ಹೊಸ ವಂದೇ ಭಾರತ್ ಸ್ಲೀಪರ್ ಬಗ್ಗೆ ಕೇಂದ್ರ ಸಚಿವ ಜೋಶಿ ಟ್ವೀಟ್‌ ಮಾಡಿದ್ದು, "ಬೆಂಗಳೂರಿನಿಂದ ಮುಂಬೈಗೆ ನೂತನ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ರೈಲು ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕದ ಮಾರ್ಗವಾಗಿ ಸಂಚರಿಸಲು ನನ್ನ ಮನವಿಗೆ ಸ್ಪಂದಿಸಲಾಗಿದೆ. ನೂತನ ವಂದೇ ಭಾರತ್ ಸ್ಲೀಪರ್ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಕಲ್ಯಾಣ ಕರ್ನಾಟಕದ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ಗೆ ಓಡಿಸಲಾಗುತ್ತದೆ" ಎಂದು ತಿಳಿಸಿದ್ದಾರೆ.

ಸ್ಲೀಪರ್ ರೈಲಾಗಿ ಬದಲಾವಣೆ : ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಈಗಾಗಲೇ ಅನುಮೋದನೆ ನೀಡಲಾಗಿತ್ತು. ಈ ಸೂಪರ್ ಫಾಸ್ಟ್ ರೈಲನ್ನು ಶೀಘ್ರವೇ ಪ್ರಾರಂಭಿಸುವುದಾಗಿ, ತದನಂತರದ ದಿನಗಳಲ್ಲಿ ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವಂತೆ ನನ್ನ ಪ್ರಸ್ತಾವನೆಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದ ಅಭಿವೃದ್ದಿಯ ಜೊತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವ ಹಾಗೂ ರಾಜ್ಯದಲ್ಲಿನ ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸುವುದರ ಜೊತೆಗೆ ಉತ್ತಮ ಸಂಚಾರ ಸೌಲಭ್ಯವನ್ನು ಈ‌ ನೂತನ ವಂದೇ ಭಾರತ್ ರೈಲು ಬಲವರ್ಧಿಸಲಿದೆ. ನೂತನ ವಂದೇ ಭಾರತ್ ಸ್ಲೀಪರ್ ರೈಲನ್ನು ಐಟಿ ಸಿಟಿ ಬೆಂಗಳೂರು - ವಾಣಿಜ್ಯ ನಗರಿ ಮುಂಬೈ ಮಧ್ಯೆ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಶ್ವಿನಿ ವೈಷ್ಣವ್, ವಿ. ಸೋಮಣ್ಣ ಅವರಿಗೆ ಸಚಿವ ಜೋಶಿ ಧನ್ಯವಾದಗಳನ್ನು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ