*ಶೇ 60 ರಷ್ಟು ಏರಿಕೆ ಮಾಡಿ ಅಧಿಸೂಚನೆ,* * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ಲಾಭ* *ಶ್ರಮಿಕರಿಗೆ ಸರ್ಕಾರದಿಂದ ಮತ್ತೊಂದು ಕೊಡುಗೆ*

==========================

*ಮುಖ್ಯಾಂಶಗಳು*

==================

* ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ

* 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ

* ಎಲ್ಲ ನಿಗದಿತ ಉದ್ಯೋಗಗಳು ಒಂದೇ ಅಧಿಸೂಚನೆಯ ವ್ಯಾಪ್ತಿಗೆ

* ಇ-ಕಾಮರ್ಸ್‌, ಕೊರಿಯರ್‌ ಸಂಸ್ಥೆ, ಧಾರ್ಮಿಕ ಸಂಸ್ಥೆ ನೌಕರರಿಗೂ ಅನುಕೂಲ

====================

ಬೆಂಗಳೂರು, ಮೇ 23:  ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ.

ಈ ಅಧಿಸೂಚನೆಯು ರಾಜ್ಯದ ಅಸಂಘಟಿತ ಮತ್ತು ನಿರ್ದಿಷ್ಟ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಲಿದೆ. ಸುಪ್ರೀಂಕೋರ್ಟ್‌ ನಿರ್ದೇಶನದ ಅನ್ವಯ ಈ ವೇತನ  ಪರಿಷ್ಕರಣೆಯನ್ನು ಮಾಡಲಾಗಿದೆ.

*ಒಂದೇ ಅಧಿಸೂಚನೆಯಡಿ ತರಲಾಗಿದೆ*

ಈ ಬಾರಿಯ ಅಧಿಸೂಚನೆಯ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಎಲ್ಲಾ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತಂದಿರುವುದು. ಈ ಹಿಂದೆ ಇದ್ದ ನಾಲ್ಕು ವಲಯಗಳ ವರ್ಗೀಕರಣವನ್ನು ಮೂರು ವಲಯಗಳಿಗೆ ಪರಿಷ್ಕರಿಸಲಾಗಿದೆ.

*ಯಾರಿಗೆ ಲಾಭವಾಗಲಿ*

ನೂತನ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆಯು ಖಾಸಗಿ ಶಾಲೆ- ಕಾಲೇಜು ಬೋಧಕೇತನ ಸಿಬ್ಬಂದಿ, ಇ-ಕಾಮರ್ಸ್‌ ವಲಯದ ನೌಕರರು ಮತ್ತು ಕೋರಿಯರ್‌ ಸಂಸ್ಥೆಗಳ ನೌಕರರು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ದುಡಿಯುವ ಸಿಬ್ಬಂದಿಗೂ ಲಾಭ ಮಾಡಿಕೊಟ್ಟಿದೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿನ 81 ಅನುಸೂಚಿತ ಉದ್ಯೋಗಗಳಲ್ಲಿ ದುಡಿಯುವ ಶ್ರಮಿಕರಿಗೆ ಅನುಕೂಲವಾಗಲಿದೆ.

*ಈಡೇರಿದ ಬಹುದಿನಗಳ ಬೇಡಿಕೆ*

ಕನಿಷ್ಠ ವೇತನ ಪರಿಷ್ಕರಣೆ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ವಿವಿಧ ಸಂಘಟನೆಗಳು, ಕಾರ್ಮಿಕರ ಒಕ್ಕೂಟಗಳು ಇದಕ್ಕಾಗಿ ಬೇಡಿಕೆ ಇಟ್ಟಿದ್ದವು. ಇದೀಗ ಕಾರ್ಮಿಕ ಇಲಾಖೆ  ಸ್ಪಂದಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನ ನಡೆಸಲು ಕಷ್ಟಪಡುತ್ತಿದ್ದ ಕಾರ್ಮಿಕ ವಲಯಕ್ಕೆ ಈ ಕನಿಷ್ಠ ವೇತನ ಪರಿಷ್ಕರಣೆಯು ದೊಡ್ಡ ಮಟ್ಟದ ಅನುಕೂಲ ಮಾಡಿಕೊಡಲಿದೆ. ಪರಿಷ್ಕೃತ ಕನಿಷ್ಠ ವೇತನದ ಕರಡು ಅಧಿಸೂಚನೆಯನ್ನು ಕಳೆದ ವರ್ಷದ ಏಪ್ರಿಲ್ 11 ರಂದು ಹೊರಡಿಸಲಾಗಿತ್ತು. 2016-2017 ರಲ್ಲಿ ಜಾರಿಗೆ ಬಂದ ಕೊನೆಯ ಪರಿಷ್ಕರಣೆಯ ಒಂದು ದಶಕದ ನಂತರ ಈ ಪರಿಷ್ಕರಣೆ ಜಾರಿಗೆ ಬಂದಿದೆ. ಕಾರ್ಮಿಕ ಸಂಘಗಳು ಕನಿಷ್ಠ ವೇತನ ಅಧಿಸೂಚನೆ ಹೊರಡಿಸಲು ಒತ್ತಾಯಿಸುತ್ತಿದ್ದವು. ಆದರೆ ಕೈಗಾರಿಕೆಗಳು, ವಿಶೇಷವಾಗಿ ಎಂಎಸ್‌ಎಂಇ ವಲಯದಿಂದ ವಿರೋಧ ವ್ಯಕ್ತವಾಗಿತ್ತು.

*ಏರಿಕೆ ಲೆಕ್ಕಾಚಾರ ಹೇಗೆ*

ವಲಯ 3 ರಲ್ಲಿನ ಕೌಶಲ್ಯರಹಿತ ಕಾರ್ಮಿಕರಿಗೆ ರೂ.19,300 ರಿಂದ ವಲಯ 1 ರಲ್ಲಿ ಹೆಚ್ಚು ಕೌಶಲ್ಯಪೂರ್ಣ ಕಾರ್ಮಿಕರಿಗೆ 31,100 ರವರೆಗೆ ಏರಿಕೆ ಮಾಡಲಾಗಿದೆ. ಎರಡು ವರ್ಷಗಳ 1,030 ಮೊತ್ತದ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು (ವಿಡಿಎ) ಕನಿಷ್ಠ ವೇತನದಲ್ಲಿ ಸೇರಿಸಲಾಗಿದೆ. ಕನಿಷ್ಠ ವೇತನ ಲೆಕ್ಕಾಚಾರ ಮಾಡಲು ರಾಜ್ಯವನ್ನು ಮೂರು ವಲಯಗಳಾಗಿ ವರ್ಗೀಕರಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರದೇಶವು ವಲಯ 1 ರ ಅಡಿಯಲ್ಲಿ ಬರಲಿದೆ. ವಲಯ 2 ರಲ್ಲಿ ಜಿಲ್ಲಾ ಕೇಂದ್ರಗಳು ಬರಲಿವೆ ಮತ್ತು ಉಳಿದ ಪ್ರದೇಶಗಳು ವಲಯ 3 ರ ಅಡಿಯಲ್ಲಿ ವರ್ಗೀಕರಿಸಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ